ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗೆದ್ದಿದ್ದ ನೀರಜ್ ಚೋಪ್ರಾ ಈಗಕಂಪನಿಯೊಂದರ ಸಿಇಒ, ಟಿವಿ ವರದಿಗಾರ, ಬ್ಯಾಂಕ್ ನೌಕರ, ಸಿನಿಮಾ ನಿರ್ದೇಶಕ ಹೀಗೆ ವಿವಿಧ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.
ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಸುವ ’ಕ್ರೆಡ್ ಆ್ಯಪ್’ ಕಂಪನಿಯ ಜಾಹೀರಾತಿನಲ್ಲಿ ನೀರಜ್ ನಾನಾ ಅವತಾರಗಳಲ್ಲಿ ಕಾಣಿಸಿಕೊಂಡಿದ್ದಾರೆ.ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಟೊಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ ಬೆನ್ನಲ್ಲೇ ನೀರಜ್ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಸಂಪಾದಿಸಿದ್ದಾರೆ.
ಈ ಜಾಹೀರಾತಿಗೆ ಅಭಿಮಾನಿಗಳು ಖುಷಿಯಾಗಿದ್ದು ನಮ್ಮ ಯೂತ್ ಐಕಾನ್ ಆಟಕ್ಕೂ ಸೈ, ನಟನೆಗೂ ಸೈ ಎಂದು ಕಮೆಂಟ್‌ಗಳನ್ನು ಹಾಕುತ್ತಿದ್ದಾರೆ.
ಇಷ್ಟು ಅವತಾರಗಳಲ್ಲಿ ಕಾಣಿಸಿಕೊಂಡಿರುವುದು ನೀರಜ್ ಅವರೇ ಎಂಬುದನ್ನು ನಂಬಲುಆಗುತ್ತಿಲ್ಲ ಎಂದೂ ಕೆಲವರು ಕಮೆಂಟ್ ಮಾಡಿದ್ದಾರೆ.
ನಟ ಸಿದ್ಧಾರ್ಥ್ ಮಲ್ಹೋತ್ರಾ, ವಿರೇಂದ್ರ ಸೆಹ್ವಾಗ್, ನಿಖಿಲ್ ಅಗರ್ವಾಲ್ ಸೇರಿದಂತೆ ಹಲವು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಜಾವೆಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್ ಚಿನ್ನದ ಪದಕ ಗೆದ್ದು ಇತಿಹಾಸ ನಿರ್ಮಿಸಿ ದೇಶದ ಮನೆಮಾತಾಗಿದ್ದಾರೆ. ಈಗ ಅವರ ಬ್ರ್ಯಾಂಡ್ ಮೌಲ್ಯವೂ ಹೆಚ್ಚಾಗಿದ್ದು ಕಾರ್ಪೋರೆಟ್ ಕಂಪನಿಗಳು ಅವರನ್ನು ರಾಯಭಾರಿಯಾಗಿ ನೇಮಿಸಿಕೊಳ್ಳಲು ಮುಗಿ ಬಿದ್ದಿವೆ.
ಒಲಿಂಪಿಕ್ಸ್‌ನಲ್ಲಿ ನೀರಜ್ ಚಿನ್ನದ ಪದಕ ಗೆದ್ದ ಬಳಿಕ ನಟಿಸಿದ ಮೊದಲ ಜಾಹೀರಾತು ಇದಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.