ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪತಂಜಲಿಯಿಂದ ಕೋವಿಡ್–19ಗೆ ಕೊರೊನಿಲ್‌: ಸಾಮಾಜಿಕ ಜಾಲತಾಣದಲ್ಲಿ ಮೀಮ್‌ಗಳು ವೈರಲ್‌

Last Updated 24 ಜೂನ್ 2020, 4:34 IST
ಅಕ್ಷರ ಗಾತ್ರ

ನವದೆಹಲಿ: ಕೊರೊನಾ ವೈರಸ್ ಸೋಂಕಿಗೆ ಚಿಕಿತ್ಸೆ ನೀಡಬಲ್ಲ ಆಯುರ್ವೇದ ಔಷಧಿಯನ್ನು ಮೊದಲ ಬಾರಿಗೆ ಅಭಿವೃದ್ಧಿಪಡಿಸಲಾಗಿದೆ ಎಂದು ಯೋಗ ಗುರು ರಾಮದೇವ್ ನೇತೃತ್ವದ ಪತಂಜಲಿ ಸಂಸ್ಥೆ ಹೇಳಿಕೊಂಡಿರುವ ಬೆನ್ನಲ್ಲೇ, ಆಯುಷ್‌ ಸಚಿವಾಲಯ ಆ ಔಷಧಿ ಕುರಿತ ಜಾಹೀರಾತು ಮತ್ತು ಮಾರಾಟ ನಿಲ್ಲಿಸುವಂತೆ ಸೂಚಿಸಿದೆ. ಇದೀಗ ಕೊರೊನಿಲ್‌ ಕುರಿತು ಸಾಕಷ್ಟು ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

‘ಕೋವಿಡ್‌–19 ಗುಣಪಡಿಸಲಿದೆ ಎಂದು ಹೇಳಿಕೊಂಡಿರುವ ಔಷಧ ವಿವರಗಳನ್ನು ಆದಷ್ಟು ಬೇಗ ಕೊಡಬೇಕು ಹಾಗೂ ಪರಿಶೀಲನೆಯವರೆಗೂ ಈ ಉತ್ಪನ್ನ ಕುರಿತು ಜಾಹೀರಾತು ನೀಡಬಾರದು’ ಎಂದು ಆಯುಷ್‌ ಸಚಿವಾಲಯ ತಾಕೀತು ಮಾಡಿದೆ.

ಕೊರೊನಿಲ್‌ ಮತ್ತು ಸ್ವಸರಿ ಔಷಧ ಬಿಡುಗಡೆ ಮಾಡಿದ್ದ ಪತಂಜಲಿ, ಇದು ಕೋವಿಡ್ ಗುಣಪಡಿಸಲಿದೆ ಎಂದು ಹೇಳಿತ್ತು. ಆದರೆ ಸಚಿವಾಲಯ, ‘ಈ ಪ್ರತಿಪಾದನೆಯ ಹಿಂದಿನ ವಿವರ ಹಾಗೂ ವೈಜ್ಞಾನಿಕ ಅಧ್ಯಯನದ ಮಾಹಿತಿ ಇಲ್ಲ’ ಎಂದು ಹೇಳಿದೆ. ಔಷಧದ ಪ್ರಯೋಗ ನಡೆದ ಆಸ್ಪತ್ರೆ, ಸ್ಥಳ, ಬಳಸಲಾದ ಔಷಧದ ಪ್ರಮಾಣ ಕುರಿತ ವಿವರಗಳನ್ನು ಒದಗಿಸಬೇಕು ಎಂದು ಸಚಿವಾಲಯವು ಪತಂಜಲಿ ಸಂಸ್ಥೆಗೆ ಸೂಚಿಸಿದೆ.

ಸಚಿವಾಲಯದ ಹೇಳಿಕೆ ಬಳಿಕ ಟ್ವಿಟರ್‌ನಲ್ಲಿ #CORONIL ಹ್ಯಾಷ್‌ಟ್ಯಾಗ್‌ ಟ್ರೆಂಡ್ ಆಗಿದ್ದು, ಅನೇಕರು ಜೋಕ್ಸ್‌, ಮೀಮ್ಸ್‌ಗಳೊಂದಿಗೆ ಪ್ರತಿಕ್ರಿಯಿಸಿದ್ದಾರೆ.

**

**

**

**

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT