ಸೋಮವಾರ, ಸೆಪ್ಟೆಂಬರ್ 26, 2022
22 °C

ಅಧೀನ ಸಿಬ್ಬಂದಿಗಳನ್ನು ಲಾಕಪ್‌ನಲ್ಲಿ ಕೂಡಿ ಹಾಕಿದ ಎಸ್‌ಪಿ: ವಿಡಿಯೊ ವೈರಲ್

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಪಟ್ನಾ: ಅಧೀನ ಸಿಬ್ಬಂದಿ ನಿರೀಕ್ಷೆಗೆ ತಕ್ಕಂತೆ ಕೆಲಸ ಮಾಡುತ್ತಿಲ್ಲ ಎಂಬ ಕಾರಣಕ್ಕೆ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಸಿಬ್ಬಂದಿಯನ್ನು ಲಾಕಪ್‌ನಲ್ಲಿ ಕೂಡಿ ಹಾಕಿರುವ ಘಟನೆ ಬಿಹಾರದ ನವಾಡದಲ್ಲಿ ನಡೆದಿದೆ. 

ಪೊಲೀಸರು ಲಾಕಪ್​ನಲ್ಲಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನವಾಡ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಗೌರವ್ ಮಂಗ್ಲಾ ವಿರುದ್ಧ ಆಕ್ರೋಶಕ್ಕೆ ಕಾರಣವಾಗಿದೆ.

ಘಟನೆ ಸಂಬಂಧ ಗೌರವ್ ಮಂಗ್ಲಾ ಅವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಬಿಹಾರ ಪೊಲೀಸ್ ಒಕ್ಕೂಟ (ಬಿಪಿಎ) ಒತ್ತಾಯಿಸಿದೆ. 

ಸಬ್​ ಇನ್​ಸ್ಪೆಕ್ಟರ್​ಗಳಾದ ಶತ್ರುಘ್ನ ಪಾಸ್ವಾನ್ ಮತ್ತು ರಾಮ್​ರೇಖಾ ಸಿಂಗ್, ಎಎಸ್​ಐಗಳಾದ ಸಂತೋಷ್ ಪಾಸ್ವಾನ್, ಸಂಜಯ್ ಸಿಂಗ್ ಮತ್ತು ರಾಮೇಶ್ವರ್ ಉರೌನ್ ಅವರು ಲಾಕಪ್​ನಲ್ಲಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. 

ಕೆಲವು ಪ್ರಕರಣಗಳನ್ನು ಪರಿಶೀಲಿಸುವ ಸಲುವಾಗಿ ಸೆ. 8ರಂದು ರಾತ್ರಿ 9 ಗಂಟೆ ಸುಮಾರಿಗೆ ಎಸ್​ಪಿ ಗೌರವ್ ಮಂಗ್ಲಾ ಠಾಣೆಗೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಕಿರಿಯ ಅಧಿಕಾರಿಗಳು ಕರ್ತವ್ಯ ನಿರ್ವಹಣೆಯಲ್ಲಿ ಲೋಪ ಎಸಗಿರುವುದು ಪತ್ತೆಯಾಗಿತ್ತು. ಇದರಿಂದ ಕೋಪಗೊಂಡಿದ್ದ ಗೌರವ್, ತಪ್ಪು ಮಾಡಿದವರನ್ನು ಲಾಕಪ್​ನಲ್ಲಿ ಇರಿಸುವಂತೆ ಹೇಳಿದ್ದರು. ಆದರೆ, ಏನು ತಪ್ಪು ಮಾಡಿದ್ದರೂ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಕ್ಕಿಲ್ಲ ಎಂದು ಮೂಲಗಳು ತಿಳಿಸಿವೆ.

ಪೊಲೀಸರನ್ನು ಲಾಕಪ್​ನಲ್ಲಿ ಕೂಡಿ ಹಾಕಿರುವ ಯಾವುದೇ ವಿಡಿಯೊ ಬಹಿರಂಗಗೊಂಡಿಲ್ಲ ಎಂದು ಗೌರವ್ ಹೇಳಿಕೊಂಡಿದ್ದರು. ಆದರೆ, ಅವರು ಹೇಳಿಕೆ ನೀಡಿದ ಕೆಲವೇ ಗಂಟೆಗಳಲ್ಲಿ ವಾಟ್ಸಾಆ್ಯಪ್‌ನಲ್ಲಿ ವಿಡಿಯೊ ವೈರಲ್ ಆಗಿದೆ. 

ಓದಿ... ವಿಜಯನಗರ: ಗಣೇಶನ ಮೂರ್ತಿ ವಿಸರ್ಜನೆ ವೇಳೆ ಕ್ರೇನ್ ಬಿದ್ದು ಯುವಕ ಸಾವು

ಓದಿ... ವಿಚಾರಣಾಧೀನ ಕೈದಿ ಜೈಲಿನಲ್ಲೇ ಸಾವು: ₹ 10 ಲಕ್ಷ ಪರಿಹಾರಕ್ಕೆ ಶಿಫಾರಸು 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು