ನವದೆಹಲಿ: ದೆಹಲಿಯ ಸರ್ಕಾರಿ ಶಾಲೆಯ ಶಿಕ್ಷಕಿಯೊಬ್ಬರು ತರಗತಿಯಲ್ಲಿ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಇಂಗ್ಲಿಷ್ ಶಿಕ್ಷಕಿ ಮನು ಗುಲಾಟಿ ಅವರು ವಿದ್ಯಾರ್ಥಿಗಳೊಂದಿಗೆ ಡ್ಯಾನ್ಸ್ ಮಾಡುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಈ ವಿಡಿಯೊವನ್ನು ಮನು ಅವರು ಟ್ವಿಟರ್ನಲ್ಲಿ ಹಂಚಿಕೊಂಡಿದ್ದು, ‘ಬೇಸಿಗೆ ಶಿಬಿರದ ಕೊನೆಯ ದಿನವೂ ನಮ್ಮ ಡ್ಯಾನ್ಸ್ ಕಾರ್ಯಕ್ರಮ ಮುಂದುವರಿಯಿತು. ಇದು ಸಂತೋಷ ಮತ್ತು ಒಗ್ಗಟ್ಟಿನ ಪರಿಪೂರ್ಣ ಕ್ಷಣಗಳಿಗೆ ಕಾರಣವಾಯಿತು’ ಎಂದು ಬರೆದುಕೊಂಡಿದ್ದಾರೆ.

ಈ ವಿಡಿಯೊವನ್ನು 5.77ಲಕ್ಷ ಮಂದಿ ವೀಕ್ಷಿಸಿದ್ದು, 28.5 ಸಾವಿರಮಂದಿ ಲೈಕ್ ಮಾಡಿದ್ದಾರೆ.

ಪಾಠ ಮಾಡುವುದರ ಜೊತೆಗೆ ಮನು ಅವರ ಈ ಪ್ರಯತ್ನಕ್ಕೆ ನೆಟ್ಟಿಗರು ಸಾಕಷ್ಟು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಈ ರೀತಿಯ ಶಿಕ್ಷಕರು ವಿದ್ಯಾರ್ಥಿಗಳೊಂದಿಗೆ ಸುಮಧುರ ಬಾಂಧವ್ಯ ಸೃಷ್ಟಿಸಲು ಕಾರಣವಾಗುತ್ತಾರೆ ಎಂಬುದು ನೆಟ್ಟಿಗರ ಅಭಿಪ್ರಾಯ.

‘ಸಮಾಜಕ್ಕೆ ನಿಮ್ಮಂತಹ ಶಿಕ್ಷಕರ ಅಗತ್ಯವಿದೆ. ನಿಮ್ಮೊಂದಿಗೆ ವಿದ್ಯಾರ್ಥಿಗಳು ಅಧ್ಯಯನ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಆನಂದಿಸುತ್ತಿದ್ದಾರೆ... ನಿಮಗೊಂದು ಸೆಲ್ಯೂಟ್’ ಎಂದು ವ್ಯಕ್ತಿಯೊಬ್ಬರು ಟ್ವೀಟ್ ಮಾಡಿದ್ದಾರೆ.

ಮನು ಗುಲಾಟಿ ಅವರು ಈ ಹಿಂದೆಯೂ ವಿದ್ಯಾರ್ಥಿನಿಯರೊಂದಿಗೆ ಡ್ಯಾನ್ಸ್ ವಿಡಿಯೊವನ್ನು ಟ್ವಿಟರ್ನಲ್ಲಿ ಹಂಚಿಕೊಳ್ಳುವ ಮೂಲಕ ಗಮನ ಸೆಳೆದಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.