ಸೋಮವಾರ, ಸೆಪ್ಟೆಂಬರ್ 27, 2021
22 °C

ಮಡಿದ ಗಂಡನ ನೆನಪಿಗಾಗಿ ದೇವಸ್ಥಾನ ಕಟ್ಟಿದ ಮಹಿಳೆಯಿಂದ ನಿತ್ಯ ಪೂಜೆ

ಪ್ರಜಾವಾಣಿ ವೆಬ್‌ ಡೆಸ್ಕ್‌‌ Updated:

ಅಕ್ಷರ ಗಾತ್ರ : | |

ವಿಜಯವಾಡ: ರಸ್ತೆ ಅಪಘಾತದಲ್ಲಿ ಮಡಿದ ಗಂಡನ ನೆನಪಿಗಾಗಿ ಆಂಧ್ರಪ್ರದೇಶದ ಪ್ರಕಾಶಂ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ದೇವಸ್ಥಾನ ಕಟ್ಟಿದ್ದಾರೆ.

ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿರುವ ಗಂಡನ ಮೂರ್ತಿಗೆ ಮಹಿಳೆಯು ಪೂಜೆ ಸಲ್ಲಿಸುತ್ತಿರುವ ಫೋಟೊ ಮತ್ತು ವಿಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿವೆ.

ಗಂಡನ ಸ್ಮರಣೆಯನ್ನು ಜೀವಂತವಾಗಿಡಲು ದೇವಸ್ಥಾನವನ್ನು ಕಟ್ಟಿಸಿದ್ದೇನೆ ಎಂದು ಮಹಿಳೆ ತಿಳಿಸಿದ್ದಾರೆ.

ಈ ಬಗ್ಗೆ ಸ್ಥಳೀಯ ಮಾಧ್ಯಮಗಳೊಂದಿಗೆ ಮಾತನಾಡಿರುವ ಪ್ರಕಾಶಂ ಜಿಲ್ಲೆಯ ನಿಮ್ಮವನಂ ಗ್ರಾಮದ ನಿವಾಸಿ ಪದ್ಮಾವತಿ, 'ನಮ್ಮ ಕುಟುಂಬದಲ್ಲಿ ಮಹಿಳೆಯರು ಯಾವಾಗಲೂ ತಮ್ಮ ಗಂಡಂದಿರನ್ನು ಪೂಜಿಸುವುದನ್ನು ನೋಡಿದ್ದೇನೆ' ಎಂದು ತಿಳಿಸಿದ್ದಾರೆ.

'ಪತಿ ಗುರುಕುಲ ಅಂಕಿರೆಡ್ಡಿ ರಸ್ತೆ ಅಪಘಾತದಲ್ಲಿ ನಿಧನರಾದರು. ಆ ನಂತರ, ಅವರ ನೆನಪಿಗಾಗಿ ದೇವಸ್ಥಾನವನ್ನು ನಿರ್ಮಿಸಲು ನಿರ್ಧರಿಸಿದೆ' ಎಂದು ಪದ್ಮಾವತಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು