ಅಮಚವಾಡಿ: ದೇವಾಲಯದ ಹುಂಡಿಗೆ ಕನ್ನ

ಮಂಗಳವಾರ, ಜೂನ್ 25, 2019
26 °C

ಅಮಚವಾಡಿ: ದೇವಾಲಯದ ಹುಂಡಿಗೆ ಕನ್ನ

Published:
Updated:
Prajavani

ಚಾಮರಾಜನಗರ: ತಾಲ್ಲೂಕಿನ ಅಮಚವಾಡಿ ಗ್ರಾಮದ ಕಾಳಿಕೆರೆ ಗಣಪತಿ ದೇವಸ್ಥಾನದಲ್ಲಿ ಭಾನುವಾರ ರಾತ್ರಿ ಕಳ್ಳತನವಾಗಿದ್ದು, ಎರಡು ಹುಂಡಿಗಳಲ್ಲಿದ್ದ ಹಣವನ್ನು ದೋಚಲಾಗಿದೆ. 

ಅರ್ಚಕರಾದ ಶಂಕರಯ್ಯ ಅವರು ಬೆಳಿಗ್ಗೆ ದೇವಾಲಯಕ್ಕೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ಹುಂಡಿಗಳಲ್ಲಿ ₹15 ಸಾವಿರದಿಂದ  ₹20 ಸಾವಿರದಷ್ಟು ಹಣ ಇದ್ದಿರಬಹುದು ಎಂದು ಹೇಳಲಾಗಿದೆ. 

‘ರಾತ್ರಿ ಸಮಯದಲ್ಲಿ ಯಾರೋ ಕಳ್ಳರು ದೇವಸ್ಥಾನಕ್ಕೆ ಹಾಕಲಾಗಿದ್ದ ಬೀಗವನ್ನು ಒಡೆದು, ಒಳಭಾಗದ ಗ್ರಿಲ್‌ಗೆ ಅಳವಡಿಸಲಾಗಿದ್ದ ಹುಂಡಿ ಹಾಗೂ ಹಾಲ್‌ನಲ್ಲಿದ್ದ ಮತ್ತೊಂದು ಹುಂಡಿಯನ್ನು ಒಡೆದು ಅವುಗಳಲ್ಲಿದ್ದ  ₹20 ಸಾವಿರದಷ್ಟು ನಗದು ಹಣವನ್ನು ದೋಚಲಾಗಿದೆ’ ಎಂದು ಶಂಕರಯ್ಯ ಅವರು ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ. 

‘ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇವೆ. ಕಳ್ಳರು ಪತ್ತೆಯಾಗಿಲ್ಲ. ಹುಡುಕಾಟ ನಡೆಸುತ್ತಿದ್ದೇವೆ’ ಎಂದು ಚಾಮರಾಜನಗರ ಗ್ರಾಮಾಂತರ ಠಾಣೆಯ ಸಬ್‌ ಇನ್‌ಸ್ಪೆಕ್ಟರ್‌ ಎಸ್‌.ಎಸ್‌.ರವಿಕಿರಣ್‌ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.  

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !