ಉಸ್ತುವಾರಿಯಲ್ಲಿ ಹಸ್ತಕ್ಷೇಪವಿಲ್ಲ; ಎಂ.ಬಿ.ಪಾಟೀಲ

7

ಉಸ್ತುವಾರಿಯಲ್ಲಿ ಹಸ್ತಕ್ಷೇಪವಿಲ್ಲ; ಎಂ.ಬಿ.ಪಾಟೀಲ

Published:
Updated:

ವಿಜಯಪುರ: ‘ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ನನ್ನ ಯಾವುದೇ ಹಸ್ತಕ್ಷೇಪವಿಲ್ಲ. ಈ ಕುರಿತಂತೆ ಯಾರೂ ನನ್ನನ್ನು ಕೇಳಿಲ್ಲ. ನಾನೂ ಮಾತನಾಡಿಲ್ಲ’ ಎಂದು ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ ತಿಳಿಸಿದರು.

‘ಶಿವಾನಂದ ಪಾಟೀಲಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆ ತಪ್ಪಿಸಲು ನಾನು ದೇವೇಗೌಡ, ಮುಖ್ಯಮಂತ್ರಿ ಕುಮಾರಸ್ವಾಮಿ ಭೇಟಿಯಾಗಿರುವೆ. ಚರ್ಚಿಸಿರುವೆ ಎಂಬುದು ಸತ್ಯಕ್ಕೆ ದೂರವಾದುದು’ ಎಂದು ಬುಧವಾರ ಹೇಳಿದರು.

‘ಕಾಂಗ್ರೆಸ್‌ ಸಚಿವರಿಗೆ ಉಸ್ತುವಾರಿ ನಿಯೋಜಿಸುವುದು ಪಕ್ಷದ ಹೈಕಮಾಂಡ್‌. ಇದಕ್ಕೆ ಸಂಬಂಧಿಸಿದಂತೆ ನಾನು ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಡಾ.ಜಿ.ಪರಮೇಶ್ವರ್‌, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿಯಾಗಿಲ್ಲ’ ಎಂದು ತಿಳಿಸಿದರು.

Tags: 

ಬರಹ ಇಷ್ಟವಾಯಿತೆ?

  • 1

    Happy
  • 0

    Amused
  • 0

    Sad
  • 0

    Frustrated
  • 1

    Angry

Comments:

0 comments

Write the first review for this !