ತುಟ್ಟಿಯಾಗಲಿದೆ ಕೆಎಸ್‌ಆರ್‌ಟಿಸಿ ಪ್ರಯಾಣ ದರ?

7

ತುಟ್ಟಿಯಾಗಲಿದೆ ಕೆಎಸ್‌ಆರ್‌ಟಿಸಿ ಪ್ರಯಾಣ ದರ?

Published:
Updated:

ಬೆಳಗಾವಿ: ಡೀಸೆಲ್‌ ದರ ಹಾಗೂ ತುಟ್ಟಿ ಭತ್ಯೆ ಹೆಚ್ಚಳದಿಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ (ಕೆಎಸ್‌ಆರ್‌ಟಿಸಿ) ಆರ್ಥಿಕ ಹೊರೆ ಬೀಳುತ್ತಿರುವುದರಿಂದ ಪ್ರಯಾಣ ದರ ಹೆಚ್ಚಿಸುವ ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ಹೇಳಿದ್ದಾರೆ.

ವಿಧಾನಪರಿಷತ್ತಿನಲ್ಲಿ ಬಿಜೆಪಿಯ ಪ್ರಾಣೇಶ ಎಂ.ಕೆ. ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಅವರು, 2014 ರಲ್ಲಿ ಬಸ್‌ ಪ್ರಯಾಣ ದರವನ್ನು ಶೇ 7.96 ರಷ್ಟು ಹೆಚ್ಚಿಸಲಾಗಿತ್ತು. ಡೀಸೆಲ್‌ ದರ ಕಡಿಮೆಯಾದ ಹಿನ್ನೆಲೆಯಲ್ಲಿ 2015ರಲ್ಲಿ ಪ್ರಯಾಣ ದರವನ್ನು ಶೇ 2ರಷ್ಟು ಇಳಿಸಲಾಗಿತ್ತು. ಆ ನಂತರ ಹಲವಾರು ಬಾರಿ ಡೀಸೆಲ್‌ ದರ ಹೆಚ್ಚಿಸಿದ್ದರೂ ಪ್ರಯಾಣ ದರ ಹೆಚ್ಚಿಸಿರಲಿಲ್ಲ. ಈಗ ಆ ಬಗ್ಗೆ ಚಿಂತನೆ ನಡೆದಿದೆ ಎಂದಿದ್ದಾರೆ.

ಹಬ್ಬ, ಜಾತ್ರೆ, ವಾರಾಂತ್ಯದಲ್ಲಿ ಪ್ರಸ್ತುತ ವಿಧಿಸುತ್ತಿರುವ ದರಕ್ಕಿಂತ ಎರಡು ಪಟ್ಟು ಹೆಚ್ಚಾಗದಂತೆ ದರ ವಿಧಿಸಲು ಅವಕಾಶವಿದೆ. ಪ್ರಯಾಣಿಕರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ಹೆಚ್ಚಿನ ಹೊರೆಯಾಗದಂತೆ ವಿಶೇಷ ಸಂದರ್ಭಗಳಲ್ಲಿ ಶೇ 20 ರಷ್ಟು ಹೆಚ್ಚು ಪ್ರಯಾಣ ದರ ವಿಧಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 4

  Happy
 • 0

  Amused
 • 0

  Sad
 • 1

  Frustrated
 • 1

  Angry

Comments:

0 comments

Write the first review for this !