ಶಿವನಸಮುದ್ರ: ನೀರಿನಲ್ಲಿ ಮುಳುಗಿ ಮೂವರು ಸಾವು

ಬುಧವಾರ, ಜೂನ್ 26, 2019
25 °C

ಶಿವನಸಮುದ್ರ: ನೀರಿನಲ್ಲಿ ಮುಳುಗಿ ಮೂವರು ಸಾವು

Published:
Updated:

ಕೊಳ್ಳೇಗಾಲ: ತಾಲ್ಲೂಕಿನ ಸತ್ತೇಗಾಲ ಗ್ರಾಮದ ಶಿವನಸಮುದ್ರದ ಸಮೀಪವಿರುವ ಐತಿಹಾಸಿಕ ವೆಸ್ಲಿ ಸೇತುವೆಯ ಬಳಿ ಭಾನುವಾರ ಈಜಲು ಹೋಗಿದ್ದ ಮೂವರು  ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. 

ಬೆಂಗಳೂರಿನ ಸುಂಕದಕಟ್ಟೆಯ ಮನೋಜ್‍ಕುಮಾರ್ (23), ರಾಮನಗರ ಜಿಲ್ಲೆ ಮಾಗಡಿ ಸಮೀಪದ ಕೊತ್ತೇಗಾಲ ಗ್ರಾಮದ ಲೋಕೇಶ್ (21), ಕುಣಿಗಲ್ ತಾಲ್ಲೂಕಿನ ಲೆಪ್ಪನಾಯಕನ ಹಳ್ಳಿ ಗ್ರಾಮದ ವೀಣಾ (23) ಮೃತಪಟ್ಟವರು.

ತಿ.ನರಸೀಪುರ ತಾಲ್ಲೂಕಿನ ಮುಡುಕುತೊರೆಯ ಸ್ನೇಹಿತರೊಬ್ಬರ ಮದುವೆಗಾಗಿ ರಾಘವೇಂದ್ರ, ಸಿಂಧು, ಲೀಲಾ, ಮನೋಜ್‍ಕುಮಾರ್, ಲೋಕೇಶ್ ಮತ್ತು ವೀಣಾ ಎಂಬುವವರು ಬೆಂಗಳೂರಿನಿಂದ ಬಂದಿದ್ದರು. ಮದುವೆ ಮುಗಿಸಿಕೊಂಡು ತಾಲ್ಲೂಕಿನ ಶಿವನಸಮುದ್ರದ ಗಗನಚುಕ್ಕಿ ಮತ್ತು ಭರಚುಕ್ಕಿ ವೀಕ್ಷಣೆಗಾಗಿ ಹೊರಟಿದ್ದರು.

‘ದಾರಿ ಮಧ್ಯೆ ಸಿಗುವ ವೆಸ್ಲಿ ಸೇತುವೆ ಬಳಿ ಆರು ಮಂದಿಯೂ ಈಜುವುದಕ್ಕಾಗಿ ನೀರಿಗೆ ಇಳಿದರು. ಈ ಸಂದರ್ಭದಲ್ಲಿ ವೀಣಾ ಅವರು ನೀರಿನ ಸೆಳತಕ್ಕೆ ಸಿಕ್ಕರು. ಅವರನ್ನು ರಕ್ಷಿಸಲು ಲೋಕೇಶ್‌ ಮತ್ತು ಮನೋಜ್‌ಕುಮಾರ್‌ ಮುಂದಾದರು. ಆದರೆ, ನೀರಿನ ರಭಸಕ್ಕೆ ಸಿಲುಕಿ ಮೂವರೂ ಮೃತಪ‍ಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಕೊಳ್ಳೇಗಾಲ ಗ್ರಾಮಾಂತರ ಪೋಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ನುರಿತ ಈಜುಗಾರರ ಸಹಾಯದಿಂದ ಮೂವರ ಶವವನ್ನೂ ಹೊರತೆಗೆಯಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !