ಸೋಮವಾರ, ಫೆಬ್ರವರಿ 17, 2020
30 °C

ಇಸ್ಲಾಮಿಕ್‌ ಸ್ಟೇಟ್‌ ಬೆಂಬಲಿಗರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಯಮತ್ತೂರು: ಐಎಸ್‌ ಉಗ್ರ ಸಂಘಟನೆಯ ಮೂವರು ಬೆಂಬಲಿಗರನ್ನು ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಇವರ ಮನೆಗಳ ಶೋಧ ನಡೆಸಿದ್ದು, ಡಿಜಿಟಲ್‌ ಸಾಧನಗಳು ಮತ್ತು ಹಲವು ಮಹತ್ವಪೂರ್ಣ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸರ್ಕಾರಿ ಆಸ್ಪತ್ರೆಯಲ್ಲಿ ಮೂವರು ಆರೋಪಿಗಳ ಆರೋಗ್ಯ ತಪಾಸಣೆ ನಡೆಸಿದ್ದು, ನಂತರ ಪ್ರಧಾನ ಜಿಲ್ಲಾ ನ್ಯಾಯಾಧೀಶ ಆರ್‌. ಶಕ್ತಿವೇಲ್‌ ಅವರ ಮುಂದೆ ಹಾಜರುಪಡಿಸಲಾಯಿತು. 

ನ್ಯಾಯಾಧೀಶರು ಆರೋಪಿಗಳನ್ನು ಜೂನ್‌ 28ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಈಸ್ಟರ್ ದಿನದಂದು ಶ್ರೀಲಂಕಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣ ಸಂಬಂಧ ರಾಷ್ಟ್ರೀಯ ತನಿಖಾ ದಳವು (ಎನ್‌ಐಎ) ನಗರದ ಏಳು ಪ್ರದೇಶಗಳಲ್ಲಿ ಇತ್ತೀಚೆಗೆ ಶೋಧ ಕಾರ್ಯ ನಡೆಸಿತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು