10ರಂದು ಟಿಪ್ಪು ಜಯಂತಿ ಆಚರಣೆ

7
ಪೂರ್ವಭಾವಿ ಸಭೆ ನಡೆಸಿದ ಡಿ.ಸಿ; ಸಭೆಯಿಂದ ಹೊರನಡೆದ ಮುಸ್ಲಿಂ ಮುಖಂಡರು

10ರಂದು ಟಿಪ್ಪು ಜಯಂತಿ ಆಚರಣೆ

Published:
Updated:
Deccan Herald

ಚಾಮರಾಜನಗರ: ಜಿಲ್ಲಾಡಳಿತ ವತಿಯಿಂದ ಟಿಪ್ಪು ಸುಲ್ತಾನ್ ಜಯಂತಿಯನ್ನು ನ.10ರಂದು ನಗರದ ಜೆ.ಎಚ್.ಪಟೇಲ್‌ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಹೇಳಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಟಿಪ್ಪು ಜಯಂತಿ ಆಚರಣೆ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕಾರ್ಯಕ್ರಮದಲ್ಲಿ ಟಿಪ್ಪು ಸುಲ್ತಾನ್ ಅವರ ವಿಚಾರಗಳ ಕುರಿತು ಉಪನ್ಯಾಸ ನೀಡಲು ಮುಖ್ಯ ಭಾಷಣಕಾರರನ್ನು ಆಯ್ಕೆ ಮಾಡಬೇಕು. ್ಯಕ್ರಮಕ್ಕೆ ಆಗತ್ಯವಿರುವ ಸಿದ್ಧತೆಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹೊರನಡೆದ ಮುಸ್ಲಿಂ ಮುಖಂಡರು: ಟಿಪ್ಪು ಜಯಂತಿಯನ್ನು ಪಟ್ಟಣದ ಸರ್ಕಾರಿ ಪೇಟೆ ಪ್ರೈಮರಿ ಶಾಲಾ ಆವರಣದಲ್ಲಿ ನಡೆಸಬೇಕು ಎಂದು ಮುಸ್ಲಿಂ ಮುಖಂಡರು ಒತ್ತಾಯಿಸಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದರ್‌ ಕುಮಾರ್‌ ಮೀನಾ ಮಾತನಾಡಿ, ‘ಟಿಪ್ಪು ಜಯಂತಿ ಆಚರಣೆ ಸಂಬಂಧ ಸರ್ಕಾರದ ಕೆಲ ಮಾರ್ಗಸೂಚಿಗಳಿವೆ.

ಅದರ ಪ್ರಕಾರವೇ ಜಯಂತಿ ನಡೆಸಬೇಕು. ಆದ್ದರಿಂದ, ಜಿಲ್ಲಾಡಳಿತ ಭವನದ ಜೆ.ಎಚ್.ಪಟೇಲ್‌ ಸಭಾಂಗಣದಲ್ಲೇ ಕಾರ್ಯಕ್ರಮ ನಡೆಯಲಿದೆ’ ಎಂದು ತಿಳಿಸಿದರು.

ಇದರಿಂದ ಅಸಮಾಧಾನಗೊಂಡ ಮುಸ್ಲಿಂ ಮುಖಂಡರು ಸಭೆಯಿಂದ ಹೊರನಡೆದರು.  

ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ. ಹರೀಶ್‌ ಕುಮಾರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ‌ ಎಚ್.ಚೆನ್ನಪ್ಪ ಇದ್ದರು.‌

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !