ಬಯಲು ಶೌಚಮುಕ್ತವಾಗಿಸಲು ಪ್ರಯತ್ನ

7

ಬಯಲು ಶೌಚಮುಕ್ತವಾಗಿಸಲು ಪ್ರಯತ್ನ

Published:
Updated:
ಹೆಪ್ಸಿಬಾರಾಣಿ ಕೊರ್ಲಪಾಟಿ

ಕಲಬುರ್ಗಿ: ಪ್ರಸಕ್ತ ವರ್ಷದ ಗಾಂಧಿ ಜಯಂತಿಯಂದು ಜಿಲ್ಲೆಯನ್ನು ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿ ಘೋಷಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ತಿಳಿಸಿದ್ದಾರೆ.

ಶೌಚಾಲಯ ನಿರ್ಮಾಣದಲ್ಲಿ ಚುರುಕು ತರಲು ಪ್ರತಿ 7 ರಿಂದ 8 ಗ್ರಾಮ ಪಂಚಾಯಿತಿಗಳಿಗೆ ಒಬ್ಬರು ಜಿಲ್ಲಾ ಮಟ್ಟದ ಅಧಿಕಾರಿಯನ್ನು ನೋಡಲ್ ಅಧಿಕಾರಿ ಎಂದು ನೇಮಿಸಲಾಗಿದೆ. ಈ ಅಧಿಕಾರಿಗಳು ತಮ್ಮ ವ್ಯಾಪ್ತಿಯ ಗ್ರಾಮ ಪಂಚಾಯಿತಿಗಳಲ್ಲಿ ಉಳಿದ ಶೌಚಾಲಯಗಳ ನಿರ್ಮಾಣಕ್ಕೆ ಪ್ರೇರೇಪಿಸುವ ಕಾರ್ಯ ಮಾಡುವಂತೆ ನಿರ್ದೇಶನ ನೀಡಲಾಗಿದೆ.

ಪ್ರಸಕ್ತ ವರ್ಷ 1,01,647 ಶೌಚಾಲಯಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದ್ದು, ಈಗಾಗಲೇ 2,306 ಶೌಚಾಲಯಗಳನ್ನು ನಿರ್ಮಿಸಲಾಗಿದೆ. ಮುಂಬರುವ ಜುಲೈ ಅಂತ್ಯದೊಳಗಾಗಿ ಇನ್ನೂ 374 ಗ್ರಾಮಗಳನ್ನು ಬಯಲು ಶೌಚಮುಕ್ತ ಗ್ರಾಮಗಳು ಎಂದು ಘೋಷಿಸಲಾಗುವುದು.

ಜಿಲ್ಲೆಯ ಕಲಬುರ್ಗಿ, ಅಫಜಲಪುರ ಮತ್ತು ಸೇಡಂ ತಾಲ್ಲೂಕುಗಳಲ್ಲಿ ತಲಾ 10ಸಾವಿರ ಕುಟುಂಬಗಳಿಗೆ ಶೌಚಾಲಯ ನಿರ್ಮಿಸಬೇಕಾಗಿದೆ. ಆದರೆ ಆಳಂದ ತಾಲ್ಲೂಕಿನಲ್ಲಿ ಶೌಚಾಲಯ ನಿರ್ಮಾಣ ಕಾರ್ಯ ಮಂದಗತಿಯಲ್ಲಿದ್ದು, ಶೌಚಾಲಯವಿಲ್ಲದ ಕುಟುಂಬಗಳು ಹೆಚ್ಚಿವೆ.

ಮುಂದಿನ 15 ದಿನದೊಳಗೆ ಪ್ರತಿ ಗ್ರಾಮದಲ್ಲಿ ಕನಿಷ್ಠ 50 ಶೌಚಾಲಯಗಳನ್ನು ನಿರ್ಮಿಸುವ ಗುರಿ ನೀಡಲಾಗಿದೆ. ಜಿಲ್ಲೆಯ 248 ಗ್ರಾಮಗಳಲ್ಲಿ ಶೌಚಾಲಯ ನಿರ್ಮಾಣ ಕ್ಲಿಷ್ಟಕರವಾಗಿದೆ. ಈ ಗ್ರಾಮಗಳಿಗೆ ಹೆಚ್ಚಿನ ಒತ್ತು ನೀಡಿ ಆಗಸ್ಟ್‌ 15ರೊಳಗಾಗಿ ಶೌಚಾಲಯ ನಿರ್ಮಾಣ ಪೂರ್ಣಗೊಳಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಕಲಬುರ್ಗಿ ಜಿಲ್ಲೆಯಲ್ಲಿ ಇಲ್ಲಿಯವರೆಗೆ 34 ಗ್ರಾಮ ಪಂಚಾಯಿತಿ ವ್ಯಾಪ್ತಿಯ 209 ಹಳ್ಳಿಗಳನ್ನು ಬಯಲು ಶೌಚಮುಕ್ತ ಹಳ್ಳಿಗಳು ಎಂದು ಘೋಷಿಸಲಾಗಿದೆ.
- ಹೆಪ್ಸಿಬಾರಾಣಿ ಕೊರ್ಲಪಾಟಿ, ಜಿಲ್ಲಾ ಪಂಚಾಯಿತಿ ಸಿಇಒ

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !