ಆಸ್ಟ್ರೇಲಿಯಾದಲ್ಲಿ ಪ್ರವಾಹ: ಇಬ್ಬರ ದುರ್ಮರಣ

7

ಆಸ್ಟ್ರೇಲಿಯಾದಲ್ಲಿ ಪ್ರವಾಹ: ಇಬ್ಬರ ದುರ್ಮರಣ

Published:
Updated:
Prajavani

ಟೌನ್ಸ್‌ವಿಲ್ಲೆ: ಆಸ್ಟ್ರೇಲಿಯಾದ ಈಶಾನ್ಯ ಭಾಗದಲ್ಲಿ ಮಂಗಳವಾರವೂ ಭಾರಿ ಮಳೆಯಾಗಿದ್ದು, ಇದುವರೆಗೆ ಇಬ್ಬರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. 

ಪ್ರಧಾನಿ ಸ್ಕಾಟ್‌ ಮಾರಿಸನ್‌ ಅವರು ಪ್ರವಾಹಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ‘ಶತಮಾನದಲ್ಲೇ ಸುರಿದ ಮಹಾಮಳೆಯಾಗಿದ್ದು, ಸಾವಿರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. ವಿಮಾನ ನಿಲ್ದಾಣ, ಶಾಲಾ ಕಾಲೇಜುಗಳನ್ನು ಮುಚ್ಚಲಾಗಿದೆ’ ಎಂದರು.

‘ನಿಜಕ್ಕೂ ಅತ್ಯಂತ ಸಂಕಷ್ಟದ ಸಮಯ, ಇನ್ನು ಕೆಲವು ದಿನಗಳ ಕಾಲ ಇದೇ ಪರಿಸ್ಥಿತಿ ಮುಂದುವರಿಯಲಿದೆ’ ಎಂದರು. ಅಲ್ಲದೇ, ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ಕುಟುಂಬ ಸದಸ್ಯರಿಗೆ ಸಂತಾಪ ತಿಳಿಸಿದರು.

ಪ್ರವಾಹದಿಂದ ಟೌನ್ಸ್‌ವಿಲ್ಲೆ ಪಟ್ಟಣ ಅತೀ ಹೆಚ್ಚು ಹಾನಿಗೆ ಒಳಗಾಗಿದ್ದು, 650 ಮಂದಿಯನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. 11 ಸಾವಿರ ಮನೆಗಳ ವಿದ್ಯುತ್‌ ಸಂಪರ್ಕ ಕಡಿತಗೊಂಡಿದ್ದು, 9 ಸಾವಿರಕ್ಕೂ ಅಧಿಕ ಮಂದಿ ಸರ್ಕಾರದ ನೆರವು ಯಾಚಿಸಿದ್ದಾರೆ.

‘ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗಲಿದ್ದು, ಇದೇ ಪರಿಸ್ಥಿತಿ ಮುಂದುವರಿಯಲಿದೆ’ ಎಂದು ಕ್ವೀನ್ಸ್‌ಲ್ಯಾಂಡ್‌ನ ಹವಾಮಾನ ವಿಭಾಗದ ನಿರ್ದೇಶಕ ರಿಚರ್ಡ್‌ ವಾರ್ಡಲ್‌ ಅವರು ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 2

  Happy
 • 0

  Amused
 • 10

  Sad
 • 0

  Frustrated
 • 1

  Angry

Comments:

0 comments

Write the first review for this !