ಮೋದಿಗೆ ಯುಎಇ ‘ಝಯೇದ್’ ಪದಕ

ಶುಕ್ರವಾರ, ಏಪ್ರಿಲ್ 26, 2019
33 °C

ಮೋದಿಗೆ ಯುಎಇ ‘ಝಯೇದ್’ ಪದಕ

Published:
Updated:
Prajavani

ದುಬೈ: ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪ್ರತಿಷ್ಠಿತ ‘ಝಯೇದ್’ ಪದಕ ನೀಡಿ ಗೌರವಿಸುವುದಾಗಿ ಯುಎಇ ತಿಳಿಸಿದೆ.

ಉಭಯ ದೇಶಗಳ ಸಂಬಂಧ ಬಲಪಡಿಸುವ ನಿಟ್ಟಿನಲ್ಲಿ ಮೋದಿ ಅವರು ಪ್ರಮುಖ ಪಾತ್ರವಹಿಸಿದ್ದಕ್ಕಾಗಿ ಈ ಪದಕ ನೀಡಲಾಗುತ್ತಿದೆ ಎಂದು ಅದು ತಿಳಿಸಿದೆ.

‘ಭಾರತದ ಜತೆಗೆ ಐತಿಹಾಸಿಕವಾದ ಬಾಂಧವ್ಯ ಹೊಂದಿದ್ದೇವೆ. ನನ್ನ ಆತ್ಮೀಯ ಸ್ನೇಹಿತ ಪ್ರಧಾನಿ ನರೇಂದ್ರ ಮೋದಿ ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಮೋದಿ ಅವರ ಈ ಮಹತ್ತರ ಪ್ರಯತ್ನಗಳನ್ನು ಶ್ಲಾಘಿಸಿ ಯುಎಇ ಝಯೇದ್‌ ಪದಕ ನೀಡಿ ಗೌರವಿಸುತ್ತಿದೆ’ ಎಂದು ಅಬುಧಾಬಿ ಯುವರಾಜ ಮೊಹಮ್ಮದ್‌ ಬಿನ್‌ ಜಯೇದ್‌ ಟ್ವೀಟ್‌ ಮಾಡಿದ್ದಾರೆ.

 ಈ ಬಗ್ಗೆ ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್‌, ’ಭಾರತದ ಹೆಮ್ಮೆಯ ಪುತ್ರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಝಯೇದ್‌ ಪದಕ ನೀಡಿರುವುದನ್ನು ಅತ್ಯಂತ ಸಂತೋಷದಿಂದ ಸ್ವಾಗತಿಸುತ್ತೇನೆ’ ಎಂದು ತಿಳಿಸಿದ್ದಾರೆ.

2015ರ ಆಗಸ್ಟ್‌ನಲ್ಲಿ ಯುಎಇಗೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿ ಭೇಟಿ ನೀಡಿದ್ದರು. ಬಳಿಕ, ಕಳೆದ ವರ್ಷ ಫೆಬ್ರುವರಿಯಲ್ಲಿ ಎರಡನೇ ಬಾರಿ ಭೇಟಿ ನೀಡಿ ಯುವರಾಜ ಜತೆ ಹಲವು ವಿಷಯಗಳ ಕುರಿತು ವಿಸ್ತೃತ ಸಮಾಲೋಚನೆ ನಡೆಸಿದ್ದರು. ಈ ಸಂದರ್ಭದಲ್ಲಿ ರೈಲ್ವೆ, ಮಾನವ ಸಂಪನ್ಮೂಲ ಮತ್ತು ಹಣಕಾಸು ಸೇವೆಗಳು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿತ್ತು.  

ದೊರೆಗಳು, ರಾಷ್ಟ್ರಪತಿಗಳಿಗೆ ಮತ್ತು ರಾಷ್ಟ್ರಗಳ ಮುಖ್ಯಸ್ಥರಿಗೆ ಈ ಉನ್ನತ ಗೌರವ ನೀಡಲಾಗುತ್ತದೆ ಎಂದು ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 20

  Happy
 • 2

  Amused
 • 0

  Sad
 • 0

  Frustrated
 • 6

  Angry

Comments:

0 comments

Write the first review for this !