ಕಾಶ್ಮೀರ ಕುರಿತು ಪ್ರತಿಕ್ರಿಯೆ ನೀಡಲು ವಿಶ್ವಸಂಸ್ಥೆಯ ಮುಖ್ಯಸ್ಥರ ವಕ್ತಾರ ನಕಾರ

7

ಕಾಶ್ಮೀರ ಕುರಿತು ಪ್ರತಿಕ್ರಿಯೆ ನೀಡಲು ವಿಶ್ವಸಂಸ್ಥೆಯ ಮುಖ್ಯಸ್ಥರ ವಕ್ತಾರ ನಕಾರ

Published:
Updated:

ವಿಶ್ವಸಂಸ್ಥೆ : ಕಾಶ್ಮೀರ ಕುರಿತ ವಿಶ್ವಸಂಸ್ಥೆ ಮಾನವ ಹಕ್ಕುಗಳ ಆಯುಕ್ತರ ವರದಿ ಬಗ್ಗೆ ಪ್ರತಿಕ್ರಿಯೆ ನೀಡಲು ವಿಶ್ವಸಂಸ್ಥೆ ಮುಖ್ಯಸ್ಥ ಆಂಟೊನಿಯೊ ಗುಟೆರಸ್ ಅವರ ವಕ್ತಾರ ನಿರಾಕರಿಸಿದ್ದಾರೆ. 

ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಸ್ಥಿತಿಗತಿ ಕುರಿತು ಮಾನವ ಹಕ್ಕಗಳ ಮಂಡಳಿಯು ಅಂತರರಾಷ್ಟ್ರೀಯ ಮಟ್ಟದ ಸ್ವತಂತ್ರ ತನಿಖೆ ನಡೆಸಬೇಕು ಎಂದು ಜೂನ್‌ನಲ್ಲಿ ಪ್ರಕಟವಾದ ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಮಾನವಹಕ್ಕುಗಳ ಆಯುಕ್ತ ಜೈದ್ ರಾದ್ ಅಲ್ ಹುಸೈನ್ ಅವರ ಈ ವರದಿಯನ್ನು ಭಾರತ ತಿರಸ್ಕರಿಸಿತ್ತು.

‘ಮಾನವಹಕ್ಕು ಆಯುಕ್ತರು ಇದಕ್ಕೆ ಪ್ರತಿಕ್ರಿಯೆ ನೀಡಬೇಕು. ಅವರು ನೀಡಿರುವ ವರದಿಯ ಅಂಶಗಳನ್ನು ಸದಸ್ಯ ರಾಷ್ಟ್ರಗಳು ಮೌಲ್ಯಮಾಪನಕ್ಕೆ ಒಳಪಡಿಸಬೇಕು’ ಎಂದು ವಕ್ತಾರ ಫರಾನ್ ಹಕ್ ಹೇಳಿದ್ದಾರೆ.

ಆಗಸ್ಟ್ 31ರಂದು ಅಲ್ ಹುಸೇನ್ ಅವರ ನಾಲ್ಕು ವರ್ಷಗಳ ಅಧಿಕಾರಾವಧಿ ಮುಗಿಯಲಿದೆ. ವಿದಾಯ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಅವರು, ತಾವು ನೀಡಿರುವ ವರದಿಗೆ ಬದ್ಧರಾಗಿರುವುದಾಗಿ ತಿಳಿಸಿದ್ದರು.

ಹುಸೇನ್ ನೀಡಿರುವ ವರದಿ ಪಕ್ಷಪಾತದಿಂದ ಕೂಡಿದ್ದು, ಖಚಿತವಲ್ಲದ ಮೂಲಗಳನ್ನು ಆಧರಿಸಿ ಸಿದ್ಧಪಡಿಸಲಾಗಿದೆ ಎಂದು ವಿಶ್ವಸಂಸ್ಥೆಯಲ್ಲಿ ಭಾರತದ ಕಾಯಂ ಪ್ರತಿನಿಧಿ ತನ್ಮಯ ಲಾಲ್ ಆರೋಪಿಸಿದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !