ಶೋಧನಾ ಸಮಿತಿಯಲ್ಲಿ ಲೋಪ: ಆಕ್ಷೇಪ

ಶುಕ್ರವಾರ, ಜೂನ್ 21, 2019
22 °C

ಶೋಧನಾ ಸಮಿತಿಯಲ್ಲಿ ಲೋಪ: ಆಕ್ಷೇಪ

Published:
Updated:

ಬೆಂಗಳೂರು: ರಾಜ್ಯದ ವಿಶ್ವವಿದ್ಯಾಲಯಗಳ ಕುಲಪತಿಗಳ ಆಯ್ಕೆಯಲ್ಲಿ ಪ್ರಮುಖ ಪಾತ್ರ ವಹಿಸುವ ಶೋಧನಾ ಸಮಿತಿಯ ರಚನೆಯಲ್ಲಿನ ಲೋಪದೋಷಗಳ ಬಗ್ಗೆ ವಿಶ್ರಾಂತ ಕುಲಪತಿಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯಗಳ ವಿಶ್ರಾಂತ ಕುಲಪತಿಗಳ ವೇದಿಕೆ (ಕವಿಕುವೆ) ಈ ಸಂಬಂಧ ಹೇಳಿಕೆ ನೀಡಿದ್ದು, ಶೋಧನಾ ಸಮಿತಿಯಲ್ಲಿ ವಿಶ್ರಾಂತ ಕುಲಪತಿಗಳು, ಶಿಕ್ಷಣ ತಜ್ಞರು ಮತ್ತು ಅನುಭವಿ ಆಡಳಿತಗಾರರಷ್ಟೇ ಇರಬೇಕು ಎಂಬ ನಿಯಮ ಇದೆ. ಆದರೆ ಈಚಿನ ದಿನಗಳಲ್ಲಿ ಕುಲಾಧಿಪತಿ ಅವರು ವಿಶ್ವವಿದ್ಯಾಲಯ ನಿಯಮಗಳನ್ನು ಉಲ್ಲಂಘಿಸಿ ನೇಮಕ ಮಾಡಿದ್ದಾರೆ. ಇದು ಟೀಕೆಗೂ ಕಾರಣವಾಗಿದೆ ಎಂದು ಹೇಳಿದೆ.

ಈಚೆಗೆ ರಾಜ್ಯದ ಒಂದು ವಿಶ್ವವಿದ್ಯಾಲಯದ ಶೋಧನಾ ಸಮಿತಿಯ ಅಧ್ಯಕ್ಷರನ್ನಾಗಿ ಇತ್ತೀಚೆಗೆಷ್ಟೇ ಕುಲಪತಿಯಾಗಿ ನೇಮಕಗೊಂಡಿದ್ದವರನ್ನು ನೇಮಕ ಮಾಡಲಾಗಿದೆ. ಇದು ನಿಯಮಗಳ ಸ್ಪಷ್ಟ ಉಲ್ಲಂಘನೆ. ಶೋಧನಾ ಸಮಿತಿಯ ಸದಸ್ಯರನ್ನಾಗಿ ಕುಲಪತಿ ಶ್ರೇಣಿಯವರಿಗಿಂತ ಕಡಿಮೆ ಶ್ರೇಣಿಯವರನ್ನು ನೇಮಿಸಬಾರದು, ಶೋಧನಾ ಸಮಿತಿಯ ಗೌರವಕ್ಕೆ ಯಾವತ್ತೂ ಚ್ಯುತಿಯಾಗದಂತೆ ನೋಡಿಕೊಳ್ಳಬೇಕು ಎಂದು ವೇದಿಕೆ ಒತ್ತಾಯಿಸಿದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !