ಉಗ್ರರ ದಮನಕ್ಕೆ ಭಾರತದೊಂದಿಗೆ ಸಹಕರಿಸಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಆಗ್ರಹ

ಶನಿವಾರ, ಮೇ 25, 2019
28 °C

ಉಗ್ರರ ದಮನಕ್ಕೆ ಭಾರತದೊಂದಿಗೆ ಸಹಕರಿಸಿ: ವಿಶ್ವಸಂಸ್ಥೆ ಭದ್ರತಾ ಮಂಡಳಿ ಆಗ್ರಹ

Published:
Updated:

ನ್ಯೂಯಾರ್ಕ್‌: ಸಿಆರ್‌ಪಿಎಫ್‌ನ 40 ಮಂದಿ ಯೋಧರ ಸಾವಿಗೆ ಕಾರಣವಾದ ಆತ್ಮಾಹುತಿ ಉಗ್ರ ದಾಳಿಯನ್ನು ವಿಶ್ವ ಸಂಸ್ಥೆ ಭದ್ರತಾ ಮಂಡಳಿ(ಯುಎನ್‌ಎಸ್‌ಸಿ) ತೀವ್ರವಾಗಿ ಖಂಡಿಸಿದೆ. ಇದೊಂದು ಘೋರವಾದ ಹಾಗೂ ಹೀನ ಕೃತ್ಯ ಎಂದಿರುವ ಯುಎನ್‌ಎಸ್‌ಸಿ, ಭಯೋತ್ಪಾದಕ ಕೃತ್ಯ ಎಸಗಿರುವ ದುಷ್ಕರ್ಮಿಗಳಿಗೆ ತಕ್ಕ ಶಾಸ್ತಿ ಮಾಡಲು ಭಾರತದ ಪ್ರಯತ್ನಕ್ಕೆ ಎಲ್ಲ ರಾಷ್ಟ್ರಗಳು ಸಹಕರಿಸಬೇಕೆಂದು ತಿಳಿಸಿದೆ. 

ಫೆ.14ರಂದು ಪುಲ್ವಾಮಾದಲ್ಲಿ ನಡೆದ ಉಗ್ರರ ದಾಳಿಯಿಂದಾಗಿ ಸಿಆರ್‌ಪಿಎಫ್‌ನ 40 ಸಿಬ್ಬಂದಿ ಮೃತಪಟ್ಟು, ಹಲವು ಯೋಧರು ಗಾಯಗೊಂಡಿದ್ದಾರೆ. ಈ ಕೃತ್ಯದ ಹೊಣೆಯನ್ನು ಜೈಷ್–ಎ–ಮೊಹಮ್ಮದ್‌ ಉಗ್ರ ಸಂಘಟನೆ ಹೊತ್ತಿದೆ. ಯುಎನ್‌ಎಸ್‌ಸಿನ ಸದಸ್ಯ ರಾಷ್ಟ್ರಗಳು ಈ ಕೃತ್ಯವನ್ನು ತೀವ್ರವಾಗಿ ಖಂಡಿಸಿವೆ ಎಂದು ಯುಎನ್‌ಎಸ್‌ಸಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. 

ಭಯೋತ್ಪಾದನೆ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿರುವವರು, ಆರ್ಥಿಕ ಸಹಕಾರ ನೀಡುತ್ತಿರುವವರು ಹಾಗೂ ಉಗ್ರ ಸಂಘಟನೆಗಳ ಮೇಲೆ ಕ್ರಮಕೈಗೊಳ್ಳುವಂತೆ ಎಲ್ಲ ರಾಷ್ಟ್ರಗಳಿಗೆ ಯುಎನ್‌ಎಸ್‌ಸಿ ಆಗ್ರಹಿಸಿದೆ. ಈ ವಿಚಾರದಲ್ಲಿ ಭಾರತ ಸರ್ಕಾರ ಹಾಗೂ ಸಂಬಂಧಿತ ಸಂಸ್ಥೆಗಳಿಗೆ ಎಲ್ಲ ರಾಷ್ಟ್ರಗಳು ಪೂರ್ಣ ಸಹಕಾರ ನೀಡುವಂತೆ ಸೂಚಿಸಿದೆ. 

ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಸಿಆರ್‌ಪಿಎಫ್‌ ಸಿಬ್ಬಂದಿಗಳ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದು, ಭಾರತೀಯರು ಹಾಗೂ ಭಾರತ ಸರ್ಕಾರಕ್ಕೆ ತನ್ನ ಅನುತಾಪ ಸೂಚಿಸಿದೆ. ಪ್ರಭಾವಯುತ ಎನಿಸಿರುವ ವಿಶ್ವಸಂಸ್ಥೆ ಭದ್ರತಾ ಮಂಡಳಿಯು ಚೀನಾ ಸೇರಿದಂತೆ 15 ರಾಷ್ಟ್ರಗಳನ್ನು ಒಳಗೊಂಡಿದೆ. 

ಬರಹ ಇಷ್ಟವಾಯಿತೆ?

 • 20

  Happy
 • 2

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !