‘ಸಮಾನ ನ್ಯಾಯ ಸಂವಿಧಾನದ ಮಂತ್ರ’

ಬುಧವಾರ, ಜೂನ್ 19, 2019
31 °C
‘ಇನ್‌ಸೈಟ್ಸ್‌ ಐಎಎಸ್‌’ ವತಿಯಿಂದ ಸಾಧಕರಿಗೆ ಸನ್ಮಾನ

‘ಸಮಾನ ನ್ಯಾಯ ಸಂವಿಧಾನದ ಮಂತ್ರ’

Published:
Updated:
Prajavani

ಬೆಂಗಳೂರು: ‘ಎಲ್ಲರಿಗೂ ಸಮಾನ ನ್ಯಾಯ ಕಲ್ಪಿಸುವುದೇ ಸಂವಿಧಾನದ ಮಂತ್ರ. ದೇಶದಲ್ಲಿ ಎಲ್ಲರಿಗೂ ಸಮಾನ ಘನತೆ, ಗೌರವ ಇದೆ. ಸರ್ಕಾರಿ ಅಧಿಕಾರಿಯಾದವರು ಇದನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸಬೇಕು’ ಎಂದು ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ವಿ. ಗೋಪಾಲಗೌಡ ಸಲಹೆ ನೀಡಿದರು. 

‘ಇನ್‌ಸೈಟ್ಸ್‌ಐಎಎಸ್‌’ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಯುಪಿಎಸ್‌ಸಿ ಸಾಧಕರಿಗೆ ಭಾನುವಾರ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಜನರ ಸೇವೆ ಮಾಡುವುದಕ್ಕಾಗಿ ನಿಮಗೆ ಅಧಿಕಾರ ನೀಡಲಾಗಿದೆ. ಕಾನೂನನ್ನು ಕಾರ್ಯರೂಪಕ್ಕೆ ತರಬೇಕಾದ ಆಧಾರಸ್ತಂಭಗಳು ನೀವು’ ಎಂದು ಹೇಳಿದರು. 

‘ನೀವು ಜಾತಿ, ಧರ್ಮ, ಪಕ್ಷ, ಸಿದ್ಧಾಂತ ಮೀರಿ ಕೆಲಸ ಮಾಡಬೇಕು. ಮುಖ್ಯವಾಗಿ ನಮ್ಮದು ಜಾತ್ಯತೀತ ರಾಷ್ಟ್ರ ಎಂಬುದನ್ನು ಗಮನದಲ್ಲಿ ಇಟ್ಟುಕೊಳ್ಳಬೇಕು. ಜನಸ್ನೇಹಿಯಾಗಿ ಕಾರ್ಯನಿರ್ವಹಿಸಬೇಕು’ ಎಂದು ಸಲಹೆ ನೀಡಿದರು. 

‘ಕಷ್ಟಕರವಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ಮೂಲಕ ಸಾಧನೆ ಮಾಡಿದ್ದೀರಿ. ಆದರೆ, ಆ ಯಶಸ್ಸನ್ನು ತಲೆಗೆ ಏರಿಸಿಕೊಳ್ಳಬೇಡಿ’ ಎಂದು ನಗರ ಪೊಲೀಸ್‌ ಕಮಿಷನರ್‌ ಟಿ. ಸುನೀಲ್‌ಕುಮಾರ್ ಸಲಹೆ ನೀಡಿದರು. 

‘ಯಾವುದೇ ಇಲಾಖೆಯ ಹುದ್ದೆ ಸಿಗಲಿ ಅದನ್ನು ಆತ್ಮತೃಪ್ತಿಯಿಂದ ಮಾಡಿ. ಈ ಇಲಾಖೆ ಒಳ್ಳೆಯದು, ಆ ಇಲಾಖೆ ಕೆಟ್ಟದ್ದು ಎಂಬುದರ ಬಗ್ಗೆ ಚಿಂತಿಸಬೇಡಿ. ಜನರಿಗಾಗಿ ಕೆಲಸ ಮಾಡಿದರೆ ಆತ್ಮತೃಪ್ತಿ ಇದ್ದೇ ಇರುತ್ತದೆ’ ಎಂದು ಹೆಚ್ಚುವರಿ ಪೊಲೀಸ್‌ ಕಮಿಷನರ್‌ (ಬೆಂಗಳೂರು ಪೂರ್ವ) ಸೀಮಂತ್‌ಕುಮಾರ್‌ ಸಿಂಗ್‌ ಹೇಳಿದರು. 

‘ಇನ್‌ಸೈಟ್ಸ್‌ಐಎಎಸ್‌’ ಸಂಸ್ಥೆ ನಿರ್ದೇಶಕ ಜಿ.ಬಿ. ವಿನಯ್‌ಕುಮಾರ್‌, ವೀರಪ್ಪ ಹಾಜರಿದ್ದರು. 

ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉನ್ನತ ರ‍್ಯಾಂಕ್‌ಗಳೊಂದಿಗೆ ಉತ್ತೀರ್ಣರಾದ 65ಕ್ಕೂ ಹೆಚ್ಚು ಪ್ರತಿಭಾವಂತರನ್ನು ಸನ್ಮಾನಿಸಲಾಯಿತು.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !