ಸೋಮವಾರ, ಆಗಸ್ಟ್ 26, 2019
21 °C

ನಗರ ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷರ ನೇಮಕಕ್ಕೆ ಆಗ್ರಹ

Published:
Updated:

ಬೆಂಗಳೂರು: ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ವರ್ಷ ಕಳೆದಿದ್ದು, ತಕ್ಷಣ ಅಧ್ಯಕ್ಷ, ಉಪಾಧ್ಯಕ್ಷರ ನೇಮಕಾತಿ ಗೊಂದಲವನ್ನು ನಿವಾರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಲ್ಲಿ ಆಗ್ರಹಿಸಿದ್ದಾರೆ.

ಇಲ್ಲಿ ಮುಖ್ಯಮಂತ್ರಿ ಅವರಿಗೆ ಈ ಸಂಬಂಧ ಮನವಿ ಸಲ್ಲಿಸಿದ ಅವರು, 210 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಯ್ಕೆಯಾದ ಸಾವಿರಾರು ಸದಸ್ಯರಿಗೆ ಜನಪ್ರತಿನಿಧಿಗಳಾಗಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ಹೇಳಿದ್ದಾರೆ.

‘ಹಿಂದಿನ ಸರ್ಕಾರ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿಯನ್ನು ಚುನಾವಣೆಗೆ ಮೊದಲೇ ಪ್ರಕಟಿಸಿತ್ತು. ಬಳಿಕ ತಿದ್ದುಪಡಿಯ ಗೊಂದಲ ಉಂಟಾಗಿತ್ತು. ಹೈಕೋರ್ಟ್‌ನ ಬೆಂಗಳೂರು, ಧಾರವಾಡ, ಕಲಬುರ್ಗಿ ಪೀಠಗಳಲ್ಲಿ 15 ಪ್ರಕರಣಗಳಿದ್ದು, ತಡೆಯಾಜ್ಞೆ ನೀಡಲಾಗಿದೆ. ಕಾನೂನು ಇಲಾಖೆಯೊಂದಿಗೆ ವ್ಯವಹರಿಸಿ ಪ್ರಕರಣ ಇತ್ಯರ್ಥಕ್ಕೆ ಸೂಕ್ತ ಪರಿಹಾರ ಒದಗಿಸಬೇಕು. ಉಳಿದೆಡೆ ತಕ್ಷಣ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಿ ಅಧಿಕಾರ ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದರು.

ಇದರ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಅವರು ತಮ್ಮ ಕಾರ್ಯದರ್ಶಿಯವರಿಗೆ ಸೂಚಿಸಿದರು.

Post Comments (+)