ಲಿಂಗಾಯತ ಧರ್ಮ: ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ -ಜಾಮದಾರ

ಸೋಮವಾರ, ಏಪ್ರಿಲ್ 22, 2019
33 °C

ಲಿಂಗಾಯತ ಧರ್ಮ: ಹೋರಾಟ ಕೈಬಿಡುವ ಪ್ರಶ್ನೆಯೇ ಇಲ್ಲ -ಜಾಮದಾರ

Published:
Updated:

ಬೆಂಗಳೂರು: ‘ಸ್ವತಂತ್ರ ಲಿಂಗಾಯತ ಧರ್ಮ ಹೋರಾಟವನ್ನು ಕೈಬಿಡುವ ಪ್ರಶ್ನೆಯೇ ಇಲ್ಲ’ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಎಸ್.ಎಂ. ಜಾಮದಾರ ಸ್ಪಷ್ಟಪಡಿಸಿದ್ದಾರೆ.

‘ಲಿಂಗಾಯತ ಸ್ವತಂತ್ರ ಧರ್ಮ ಹೋರಾಟವನ್ನು ಕೈಬಿಡಲಾಗಿದೆ ಎಂದು ಕೆಲವು ರಾಜಕಾರಣಿಗಳು ನೀಡಿದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗಿವೆ. ಇಂತಹ ಹೇಳಿಕೆಗಳಲ್ಲಿ ರಾಜಕೀಯ ಅಡಗಿದೆ. ಮಹಾಸಭಾವು ರಾಜಕೀಯೇತರ ಸಂಸ್ಥೆಯಾಗಿದ್ದು, ಯಾವುದೇ ರಾಜಕೀಯ ಪಕ್ಷದ ಪರ ಅಥವಾ ವಿರುದ್ಧ ನಿಲುವು ತಾಳುವುದಿಲ್ಲ’ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಬಸವ ಧರ್ಮವನ್ನು ಜಗತ್ತಿಗೆ ಮುಟ್ಟಿಸಬೇಕು ಎಂಬ ಉದ್ದೇಶದಿಂದ ಹುಟ್ಟಿದ ಜಾಗತಿಕ ಲಿಂಗಾಯತ ಮಹಾಸಭೆಯು ತನ್ನ ಹೋರಾಟದಿಂದ ಹಿಂದೆ ಸರಿಯಲು ಸಾಧ್ಯವೇ ಇಲ್ಲ. ಲಿಂಗಾಯತ ಸ್ವತಂತ್ರ ಧರ್ಮ ಎಂಬುದನ್ನು ಸಾಬೀತುಪಡಿಸುವ ಸಾಕಷ್ಟು ದಾಖಲೆಗಳು ನಮ್ಮ ಬಳಿ ಇವೆ. ಅವುಗಳನ್ನು ತೆಗೆದುಕೊಂಡು ಸುಪ್ರೀಂ ಕೋರ್ಟ್‌ಗೆ ಹೋಗಲು ನಾವು ಸಿದ್ಧರಾಗಿ ದ್ದೇವೆ’ ಎಂದೂ ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 17

  Happy
 • 1

  Amused
 • 1

  Sad
 • 0

  Frustrated
 • 5

  Angry

Comments:

0 comments

Write the first review for this !