ಶುಕ್ರವಾರ, ಜನವರಿ 28, 2022
25 °C

ಜಸ್ಟ್‌ ಮ್ಯೂಸಿಕ್‌–45 | ಬಂಗಾಳದಲ್ಲಿ ಕನ್ನಡ ಕುಮಾರ!

ಧಾರವಾಡದ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ದಿಗ್ಗಜ ಪಂ.ಸೋಮನಾಥ ಮರಡೂರ ಅವರ ಪುತ್ರ ಪಂ.ಕುಮಾರ್‌ ಮರಡೂರ ಪಶ್ಚಿಮ ಬಂಗಾಳದ ಐಟಿಸಿ ಸಂಗೀತ ಸಂಶೋಧನಾ ಅಕಾಡೆಮಿಯಲ್ಲಿ ಸಂಗೀತ ಗುರುವಾಗಿದ್ದಾರೆ. ಪ್ರತಿಷ್ಠಿತ ಸಂಗೀತ ಸಂಸ್ಥೆಯಲ್ಲಿ ಕುಮಾರ್‌ ಅವರು ಕನ್ನಡದ ಪ್ರಥಮ ಹಾಗೂ ಏಕೈಕ ಗುರುವಾಗಿದ್ದು ದೇಶ, ವಿದೇಶದ ವಿದ್ಯಾರ್ಥಿಗಳಿಗೆ ಸಂಗೀತ ಪಾಠ ಮಾಡುತ್ತಿದ್ದಾರೆ. ಸಣ್ಣ ವಯಸ್ಸಿನಲ್ಲೇ ಸಂಗೀತ ಕ್ಷೇತ್ರದಲ್ಲಿ ಎತ್ತರಕ್ಕೇರಿರುವ ಕುಮಾರ್‌ ಅವರು ಕನ್ನಡ ನಾಡಿಗೆ ಕೀರ್ತಿ ತಂದಿದ್ದಾರೆ. ಸವಾಯಿ ಗಂಧರ್ವ ಸಂಗೀತೋತ್ಸವದಲ್ಲಿ ಹಾಡಿ ಮನಸೂರೆಗೊಂಡಿದ್ದಾರೆ.

ಬಾಂಗ್ಲಾದೇಶದ ಬಂಗಾಳ ಶಾಸ್ತ್ರೀಯ ಸಂಗೀತ ಸಮ್ಮೇಳನದಲ್ಲಿ ಪ್ರತಿ ವರ್ಷ ತಪ್ಪದೇ ಹಾಡುತ್ತಾರೆ. ಹಲವು ದೇಶಗಳ ಪ್ರವಾಸ ಮಾಡಿ ನಾದಸುಧೆ ಹರಿಸಿದ್ದಾರೆ. ಮಲ್ಲಿಕಾರ್ಜುನ ಮನ್ಸೂರ ರಾಷ್ಟ್ರೀಯ ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದಾರೆ. ಡಾ.ವಸಂತರಾವ್‌ ದೇಶಪಾಂಡೆ ಯುವ ಕಲಾಕಾರ ಪುರಸ್ಕಾರ, ವಿದ್ಯಾಸಾಗರ ಪ್ರಶಸ್ತಿ, ಯುವ ಗಾಯಕ ಪುರಸ್ಕಾರ ಅವರಿಗೆ ಸಂದಿವೆ. ಇಂತಹ ಪಂ.ಕುಮಾರ್‌ ಮರಡೂರ ಅವರ ಹಿತಾನುಭವನ ಈ ವಾರದ ‘ಜಸ್ಟ್‌ ಮ್ಯೂಸಿಕ್‌’ ಸರಣಿಯಲ್ಲಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp