ಗುರುವಾರ , ಅಕ್ಟೋಬರ್ 22, 2020
21 °C

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ 2022ಕ್ಕೆ ಪೂರ್ಣ

ರಾಜ್ಯದ ರಾಜಧಾನಿ ಬೆಂಗಳೂರು ಮತ್ತು ಸಾಂಸ್ಕೃತಿಕ ನಗರಿ ಮೈಸೂರು ನಡುವಿನ ರಸ್ತೆ ಪ್ರಯಾಣವನ್ನು ಸುಗಮವಾಗಿಸಲು ದಶಪಥ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ₹ 7,400 ಕೋಟಿ ವೆಚ್ಚದ ಕಾಮಗಾರಿ ಸಮರೋಪಾದಿಯಲ್ಲಿ ನಡೆಯುತ್ತಿದೆ. ಒಟ್ಟು 118 ಕಿ.ಮೀ. ಉದ್ದದ ರಸ್ತೆ ಇದಾಗಿದೆ. ಕಾಮಗಾರಿಯನ್ನು ಎರಡು ಹಂತಗಳಲ್ಲಿ ಕೈಗೆತ್ತಿಕೊಳ್ಳಲಾಗಿದ್ದು, 2022ರ ಸೆಪ್ಟೆಂಬರ್‌ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.