ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Viral Audio| ಸ್ಕೆಚ್‌ ಹಾಕಿ ಕುಮಾರಸ್ವಾಮಿನ ಅಧಿಕಾರದಿಂದ ಇಳಿಸ್ದೆ: ಯೋಗೇಶ್ವರ್‌

Last Updated 11 ಡಿಸೆಂಬರ್ 2020, 14:09 IST
ಅಕ್ಷರ ಗಾತ್ರ

‘ಎಚ್‌.ಡಿ. ಕುಮಾರಸ್ವಾಮಿ ಸರ್ಕಾರವನ್ನು ಸ್ಕೆಚ್‌ ಹಾಕಿ ಕೆಡವಿದ್ದು ನಾನೇ’ ಎಂದು ವಿಧಾನ ಪರಿಷತ್‌ ಸದಸ್ಯ ಸಿ.ಪಿ. ಯೋಗೇಶ್ವರ್‌ ಮಾತನಾಡಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಸದ್ದುಮಾಡತೊಡಗಿದೆ. ಚನ್ನಪಟ್ಟಣದಲ್ಲಿ ಕೆಲ ದಿನಗಳ ಹಿಂದೆ ನಡೆದ ಗ್ರಾ.ಪಂ. ಪೂರ್ವಭಾವಿ ಸಭೆಯೊಂದರಲ್ಲಿ ಮಾತನಾಡಿರುವ ಯೋಗೇಶ್ವರ್‌ ಹೀಗೆ ಹೇಳಿದ್ದಾರೆ. ‘ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ–ಶಿವಕುಮಾರ್‌ ಇಬ್ಬರೂ ಸೇರಿಕೊಂಡು ಚನ್ನಪಟ್ಟಣದಲ್ಲಿ ನನ್ನನ್ನು ಸೋಲಿಸಿದರು. ಇದರಿಂದ ಮತದಾರರಿಗೆ ಮುಖ ತೋರಿಸಲು ಬೇಸರವಾಗಿ ನಾನು ಬೆಂಗಳೂರು ಸೇರಿದೆ. ನಂತರ, ಬರೀ ಚನ್ನಪಟ್ಟಣದಲ್ಲಿ ರಾಜಕೀಯ ಮಾಡಿಕೊಂಡು ಇದ್ದರೆ ಆಗದು. ಏನಾದರೂ ಮಾಡಬೇಕು ಎಂದು ನಿರ್ಧರಿಸಿ ಬೆಂಗಳೂರಿನಲ್ಲೇ ಕುಳಿತು ಸ್ಕೆಚ್‌ ಹಾಕಿ ಅವನನ್ನು ಅಧಿಕಾರದಿಂದ ಇಳಿಸಿದೆ’ ಎಂದು ಒಪ್ಪಿಕೊಂಡಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT