ಶನಿವಾರ, ಸೆಪ್ಟೆಂಬರ್ 18, 2021
30 °C

ನೋಡಿ | ಪ್ರವಾಹ ಪರಿಸ್ಥಿತಿ: ಬೆಳಗಾವಿ ವಿಭಾಗದಲ್ಲಿ ₹550 ಕೋಟಿ ನಷ್ಟ -ಡಿಸಿಎಂ ಕಾರಜೋಳ

ಬಾಗಲಕೋಟೆ: ಕಳೆದೊಂದು ವಾರದಿಂದ ಅತಿವೃಷ್ಟಿ ಹಾಗೂ ಪ್ರವಾಹದಿಂದಾಗಿ ಬೆಳಗಾವಿ ವಿಭಾಗದಲ್ಲಿ ಲೋಕೋಪಯೋಗಿ ಇಲಾಖೆಗೆ ₹ 550 ಕೋಟಿ ಹಾನಿಯಾಗಿದೆ. ಇಲಾಖೆಗೆ ಸಂಬಂಧಿಸಿದಂತೆ ಹಾನಿಯಾಗಿರುವ ಕಟ್ಟಡ, ರಸ್ತೆ, ಸೇತುವೆಗಳ ತಾತ್ಕಾಲಿಕ ದುರಸ್ತಿಗೆ ತಕ್ಷಣ ₹ 50 ಕೋಟಿ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.

ಮುಧೋಳ ತಾಲ್ಲೂಕಿನ ಮಿರ್ಜಿಯಲ್ಲಿ ಶನಿವಾರ ಘಟಪ್ರಭಾ ನದಿ ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿದ ಅವರು, ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.