ಮಂಗಳವಾರ, ಮೇ 18, 2021
28 °C

ನೋಡಿ: ಬೆಳಗಾವಿ| ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಪೊಲೀಸರ ವಶಕ್ಕೆ

ಬೆಳಗಾವಿ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ಇಲ್ಲಿ ಪೊಲೀಸರು ಶನಿವಾರ ವಶಕ್ಕೆ ಪಡೆದರು. ಅವರು ತಂಗಿದ್ದ ಮಿಲನ್ ಹೋಟೆಲ್ ನಿಂದಲೇ ಅವರನ್ನು ಕರೆದೊಯ್ದರು. ನಗರದಲ್ಲಿ ರೈತರು ಹಾಗೂ ಮುಷ್ಕರದಲ್ಲಿ ತೊಡಗಿರುವ ಸರ್ಕಾರಿ ಸಾರಿಗೆ ನೌಕರರನ್ನು ಭೇಟಿಯಾಗಲು ಅವರು ಬಂದಿದ್ದರು. ಸಾರಿಗೆ ನೌಕರರ ಮುಂದಿನ ಹೋರಾಟದ ಬಗ್ಗೆ ಚರ್ಚಿಸುವುದಕ್ಕಾಗಿ ಅವರು ಉದ್ದೇಶಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಅವರನ್ನು ವಶಕ್ಕೆ ಪಡೆದರು. ತಮ್ಮನ್ನು ಪೊಲೀಸರು ವಶಕ್ಕೆ ಪಡೆದಿದ್ದಕ್ಕೆ ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರು ಕರೆದೊಯ್ಯುವ ವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಮುಂಜಾಗ್ರತಾ ಕ್ರಮವಿದು ಎನ್ನುತ್ತಿದ್ದಾರೆ. ಸಕಾರಣ ಗೊತ್ತಿಲ್ಲ. ಇದು ತಪ್ಪು. ಚಳವಳಿ ಧಮನ ನೀತಿ ಇದಾಗಿದೆ. ಈ ಬಂಧನ‌ ಅಕ್ರವಾಗುತ್ತದೆ. ಧಮನವಾಗುತ್ತದೆ ಎಂದು ಆರೋಪಿಸಿದರು. ಯಾವಾಗಲೂ ವಾಕ್ ಸ್ವಾತಂತ್ರ್ಯ ಮತ್ತು ಚಳವಳಿ ನಡೆಸುವ ಸ್ವಾತಂತ್ರ್ಯ ಇರಬೇಕು. ಸರ್ಕಾರ ತಪ್ಪು ನಿರ್ಧಾರ ತೆಗೆದುಕೊಂಡಿದೆ. ಆಗಲಿ, ಇದನ್ನ ನಾವು ಸ್ವಾಗತ ಮಾಡುತ್ತೇವೆ' ಎಂದು ಹೇಳಿದರು

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

.