ಶನಿವಾರ, ಅಕ್ಟೋಬರ್ 1, 2022
20 °C

ಬೆಂಗಳೂರು ಶಾಲಾ ವಲಯ: ಸಂಚಾರ ದಟ್ಟಣೆ ತಾಪತ್ರಯ

 

ಬೆಂಗಳೂರಿನಲ್ಲಿ ಶಾಲಾ–ಕಾಲೇಜು ವಲಯಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ವಿಪರೀತವಾಗಿದ್ದು, ಈ ಸಮಸ್ಯೆ ನಿಯಂತ್ರಿಸಲು ಶಾಲಾ ಆಡಳಿತ ಮಂಡಳಿಗಳು ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಶಾಲೆಗಳು ಆರಂಭವಾಗುವ ಹಾಗೂ ಬಿಡುವ ಸಮಯದಲ್ಲಿ ಹೆಚ್ಚು ದಟ್ಟಣೆ ಉಂಟಾಗುತ್ತದೆ. ಸಂಚಾರ ಪೊಲೀಸರು ನೀಡುವ ಸೂಚನೆಗಳನ್ನು ಆಡಳಿತ ಮಂಡಳಿ ಪಾಲಿಸಲು ಹಿಂದೇಟು ಹಾಕುತ್ತಿದ್ದು, ಇದರಿಂದ ದಟ್ಟಣೆ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಆರೋಪವಿದೆ.