ಮಂಗಳವಾರ, ಮೇ 18, 2021
30 °C

ವಿಡಿಯೊ: ಚಾಮರಾಜನಗರ: ಗ್ರಾಮಗಳಿಗೆ ಬಂದ ಒಂಟಿ ಸಲಗ

ಚಾಮರಾಜನಗರ: ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕು ವ್ಯಾಪ್ತಿಯ ಕಾಡಂಚಿನ ಗ್ರಾಮಗಳಲ್ಲಿ ರೇಡಿಯೊ ಕಾಲರ್‌ ಅಳವಡಿಸಿದ್ದ ಒಂಟಿ ಸಲಗವೊಂದು ಶುಕ್ರವಾರ ಬೆಳಿಗ್ಗೆ ಓಡಾಟ ನಡೆಸಿ ಜನರಲ್ಲಿ ಆತಂಕ ಸೃಷ್ಟಿಸಿತು. ಈ ಆನೆಗೆ ಅರಣ್ಯ ಇಲಾಖೆಯೇ ರೇಡಿಯೊ ಕಾಲರ್‌ ಅಳವಡಿಸಿದೆ ಎಂಬುದು ನಂತರ ತಿಳಿದು ಬಂತು. ಕೊಳ್ಳೇಗಾಲ ತಾಲ್ಲೂಕಿನ ಗುಂಡಾಲ್‌, ಆಂಜನೇಯಪುರ, ಉಗನಿಯ ಸೇರಿದಂತೆ ಹಲವು ಕಡೆಗಳಲ್ಲಿ ಕೃಷಿ ಜಮೀನುಗಳಲ್ಲಿ ಓಡಾಡಿರುವ ಆನೆ, ಕಬ್ಬು ಹಾಗೂ ಭತ್ತದ ಬೆಳೆಗೆ ಸ್ವಲ್ಪ ಪ್ರಮಾಣದಲ್ಲಿ ಹಾನಿ ಮಾಡಿದೆ. ಜನರಿಗೆ ಯಾವುದೇ ತೊಂದರೆ ಮಾಡಿಲ್ಲ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp