ಶನಿವಾರ, ಮೇ 15, 2021
23 °C

ನೋಡಿ: ಕುಂಬಳ ಗಾತ್ರದಲ್ಲಿ ಆಲಿಕಲ್ಲುಗಳು, ಬೆಳೆಗೆ ಹಾನಿ

ಚಿಕ್ಕಬಳ್ಳಾಪುರ: ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ ಮತ್ತು ಬಾಗೇಪಲ್ಲಿ ತಾಲ್ಲೂಕು ವ್ಯಾಪ್ತಿಯಲ್ಲಿ ಗುರುವಾರ ಸಂಜೆ ಉತ್ತಮ ಮಳೆ ಆಗಿದೆ. ಶಿಡ್ಲಘಟ್ಟ ತಾಲ್ಲೂಕು ಬಶೆಟ್ಟಹಳ್ಳಿ ಮತ್ತು ದೊಡ್ಡಹಳ್ಳಿ ಪಂಚಾಯಿತಿ ವ್ಯಾಪ್ತಿಯಲ್ಲಿ ಸುರಿದ ಬೃಹತ್ ಗಾತ್ರದ ಆಲಿಕಲ್ಲು ಮಳೆಯಿಂದ ದ್ರಾಕ್ಷಿ ತೋಟಗಳು, ತರಕಾರಿ ಬೆಳೆಗಳು, ಪಾಲಿಹೌಸ್‌ಗಳು ನಾಶವಾಗಿವೆ.

ಚಿಂತಾಮಣಿ ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಸಿಡಿಲು ಬಡಿದು ಮನೆಯಲ್ಲಿದ್ದ ನಾಲ್ಕು ಮಕ್ಕಳು ಸೇರಿದಂತೆ ಏಳು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಾಗೇಪಲ್ಲಿ ತಾಲ್ಲೂಕಿನ ಚಿಂತಮಾಕಲದಿನ್ನೆ ಗ್ರಾಮದಲ್ಲಿ ಆಲಿಕಲ್ಲು ಮಳೆಯಿಂದ ರೈತ ನಾರಾಯಣಪ್ಪ ಅವರ ಭತ್ತದ ಬೆಳೆ ಸಂಪೂರ್ಣ ನಾಶವಾಗಿದೆ.