ಸೋಮವಾರ, ಸೆಪ್ಟೆಂಬರ್ 20, 2021
20 °C

ಚಿಕ್ಕಮಗಳೂರು: ನಗರಕ್ಕೆ ನುಗ್ಗಿದ ಕಾಡಾನೆ

ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಕಾಫಿ ಡೇ ಗ್ಲೋಬಲ್ ಘಟಕದ ಸುತ್ತಮುತ್ತ ಅಡ್ಡಾಡುತ್ತಿದೆ. ಇದು ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಸಿದೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದ್ದಾರೆ.