ದಾವಣಗೆರೆ: ಇಲ್ಲಿನ ವಿದ್ಯಾನಗರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಟಿಪ್ಪರ್ ಲಾರಿಗೆ ಕಾರು ಡಿಕ್ಕಿಯಾಗಿದ್ದರಿಂದ ಬೆಂಕಿ ಹತ್ತಿಕೊಂಡು ಕಾರು ಉರಿದಿದೆ. ಲಾರಿಗೂ ಬೆಂಕಿ ತಗಲಿದೆ. ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ವಿದ್ಯಾನಗರದ ಬಳಿ ಹೆದ್ದಾರಿ ಜಂಕ್ಷನ್ನಲ್ಲಿ ಟಿಪ್ಪರ್ ಲಾರಿಯನ್ನು ತಿರುಗುಸುತ್ತಿದ್ದ ವೇಳೆ ಬೆಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಟಿಪ್ಪರ್ನ ಡೀಸೆಲ್ ಟ್ಯಾಂಕಿಗೆ ಡಿಕ್ಕಿ ಹೊಡೆದಿದ್ದರಿಂದ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಸ್ಥಳೀಯರು ಕಾರಲ್ಲಿದ್ದ ಚಾಲಕನನ್ನು ಹೊರಗೆ ತೆಗೆದಿದ್ದಾರೆ. ಬಳಿಕ ಕಾರಿಗೆ ಸಂಪೂರ್ಣವಾಗಿ ಬೆಂಕಿ ಆವರಿಸಿಕೊಂಡಿದೆ. ಕಾರಲ್ಲೂ, ಲಾರಿಯಲ್ಲೂ ಚಾಲಕರು ಮಾತ್ರ ಇದ್ದರು. ಅಗ್ನಿ ಶಾಮಕ ದಳ ಬಂದು ಬೆಂಕಿ ನಂದಿಸಿದೆ. ಉತ್ತರ ಸಂಚಾರ ಪೊಲೀಸರು ಸ್ಥಳದಲ್ಲಿದ್ದು, ವಾಹನ ಸಂಚಾರಕ್ಕೆ ತಡೆಯಾಗದಂತೆ ನೋಡಿಕೊಂಡರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.