ಶನಿವಾರ, ಸೆಪ್ಟೆಂಬರ್ 25, 2021
29 °C

ವಿಡಿಯೊ – ಮೈಸೂರು: ಪರಂಪರೆ ಸಾರುವ ಈ ಕಟ್ಟಡಗಳಿಗೆ ಕೊನೆಗಾಲ?

ಮೈಸೂರಿನ ಪಾರಂಪರಿಕ ಕಟ್ಟಡಗಳಾದ ದೇವರಾಜ ಮಾರುಕಟ್ಟೆ ಹಾಗೂ ಲ್ಯಾನ್ಸ್‌ಡೌನ್‌ ಕಟ್ಟಡಗಳಿಗೆ ಶತಮಾನದ ಇತಿಹಾಸವಿದೆ. ಈ ಎರಡೂ ಕಟ್ಟಡಗಳನ್ನು ನೆಲಸಮಗೊಳಿಸಿ ಈಗ ಇರುವ ಶೈಲಿಯಲ್ಲೇ ಮರುನಿರ್ಮಾಣ ಮಾಡುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಇತ್ತೀಚೆಗೆ ಹೇಳಿಕೆ ಕೊಟ್ಟಿದ್ದರು. ಇದಕ್ಕೆ ಇಲ್ಲಿನ ವ್ಯಾಪಾರಿಗಳು ಹಾಗೂ ಪಾರಂಪರಿಕ ತಜ್ಞರು ವಿರೋಧ ವ್ಯಕ್ತಪಡಿಸಿದ್ದಾರೆ. ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡಗಳು ಸುರಕ್ಷಿತವಾಗಿವೆ. ಹಾನಿಯಾಗಿರುವ ಭಾಗವನ್ನು ಮಾತ್ರ ದುರಸ್ತಿಗೊಳಿಸಿ, ನವೀಕರಣ ಮಾಡಬೇಕೆಂದು ಆಗ್ರಹಿಸಿದ್ದಾರೆ. ಈ ಸಂಬಂಧ ಸಹಿ ಸಂಗ್ರಹ ಅಭಿಯಾನವನ್ನೂ ಹಮ್ಮಿಕೊಳ್ಳಲಾಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...