ಶುಕ್ರವಾರ, ಜನವರಿ 27, 2023
26 °C

ನಂಜನಗೂಡು: ಮೈದುಂಬಿ ಹರಿಯುತ್ತಿರುವ ಕಪಿಲಾ ನದಿ

ಮೈಸೂರು: ‌ಕಬಿನಿ ಜಲಾಶಯದಿಂದ ಹೊರಹರಿವಿನ ಪ್ರಮಾಣ ಹೆಚ್ಚಾಗಿದ್ದು, ಕಪಿಲಾ ನದಿ ಮೈದುಂಬಿ ಹರಿಯುತ್ತಿದೆ. ಹದಿನಾರು ಕಾಲು ಮಂಟಪ ಮುಳುಗಡೆಯಾಗಿದ್ದು, ನದಿ ಪಾತ್ರದ ನಿವಾಸಿಗಳಿಗೆ ಪ್ರವಾಹದ ಆತಂಕ ಎದುರಾಗಿದೆ.

ಶ್ರೀಕಂಠೇಶ್ವರ ದೇವಸ್ಥಾನದ ಸ್ನಾನಘಟ್ಟದ ಮೆಟ್ಟಿಲುಗಳು ಮುಳುಗಡೆಯಾಗಿದ್ದು, ಪುಣ್ಯಸ್ನಾನ ನಿರ್ಬಂಧಿಸಿ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿದ್ದಾರೆ. ಗುರುಪೂರ್ಣಿಮೆ ದಿನವಾಗಿದ್ದರಿಂದ ಶನಿವಾರ ದೇವಸ್ಥಾನಕ್ಕೆ ಹೆಚ್ಚಿನ ಭಕ್ತರು ಬಂದಿದ್ದರು. ಪುಣ್ಯ ಸ್ನಾನ ಮತ್ತು ಮುಡಿ ಸೇವೆ ತಾತ್ಕಾಲಿಕವಾಗಿ ನಿಷೇಧಿಸಿರುವುದರಿಂದ ಭಕ್ತರು ಪರದಾಡುವ ಸ್ಥಿತಿ ಎದುರಾಯಿತು.