ಭಾನುವಾರ, ಜೂನ್ 20, 2021
29 °C

ಮೈಸೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

 

ಇಂಧನ ದರ ಏರಿಕೆಯನ್ನು ಖಂಡಿಸಿ ಮೈಸೂರು ಜಿಲ್ಲಾ (ಗ್ರಾಮಾಂತರ) ಕಾಂಗ್ರೆಸ್ ವತಿಯಿಂದ ಮೈಸೂರಿನ ದಾಸಪ್ಪ ವೃತ್ತದ ಪೆಟ್ರೋಲ್ ಬಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಮಹಿಳಾ ಘಟಕದ ಕಾರ್ಯಕರ್ತರೂ ಧನ್ವಂತರಿ ರಸ್ತೆಯ ಪೆಟ್ರೋಲ್ ಬಂಕ್ ಮುಂದೆ ತೈಲ ದರ ಏರಿಕೆಗೆ ವಿರೋಧ ವ್ಯಕ್ತಪಡಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ, ಶಾಸಕ ಮಂಜುನಾಥ್, ಮಾಜಿ ಶಾಸಕ ವಾಸು, ವಿಧಾನಪರಿಷತ್ ಸದಸ್ಯ ಧರ್ಮಸೇನ, ಪಕ್ಷದ ಜಿಲ್ಲಾಧ್ಯಕ್ಷ ಬಿ.ಜೆ.ವಿಜಯಕುಮಾರ್, ನಗರ ಘಟಕದ ಅಧ್ಯಕ್ಷ ಆರ್‌‌.ಮೂರ್ತಿ, ಮಾಧ್ಯಮ ವಕ್ತಾರ ಮಹೇಶ್ ಪ್ರತಿಭಟನೆಯಲ್ಲಿ ಪಾಲ್ಗೊಂಡರು.