ಮಂಗಳವಾರ, ಮೇ 18, 2021
30 °C

ವಿಡಿಯೊ ನೋಡಿ: ಮಸ್ಕಿಯಲ್ಲಿ ಝಗಮಗಿಸುವ ‘ಸಖಿ’ ಮತಗಟ್ಟೆ

ಮಸ್ಕಿ (ರಾಯಚೂರು): ಮಸ್ಕಿ ವಿಧಾನಸಭೆ ಉಪಚುನಾವಣೆಗೆ ಶನಿವಾರ ಮತದಾನ ನಡೆಯುತ್ತಿದ್ದು, ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿರುವ ಎರಡು ಕಡೆಗೆ ‘ಸಖಿ’ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಈ ಮತಗಟ್ಟೆಗಳ ವಿಶೇಷ ಅಲಂಕಾರವು ಗಮನ ಸೆಳೆಯುತ್ತಿದೆ. ಮಸ್ಕಿ ಪಟ್ಟಣದ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜು ಶುಕ್ರವಾರ ಗುಲಾಬಿ ವರ್ಣದಲ್ಲಿ ಮುಳುಗಿಸಲಾಗಿದೆ. ‘ಪಿಂಕ್‌ ಬೂತ್‌’ ಹೆಸರಿಗೆ ತಕ್ಕಂತೆ ಗುಲಾಬಿ ವರ್ಣವೈವಿಧ್ಯದಲ್ಲಿ ಅಲಂಕಾರ ಮಾಡಲಾಗಿದ್ದು, ಕಾಲೇಜು ಮೂಲ ಕಟ್ಟಡ ಎಲ್ಲಿದೆ ಎಂದು ಹುಡುಕಾಟ ಮಾಡುವಷ್ಟು ಬದಲಾವಣೆ ಮಾಡಲಾಗಿದೆ. ಮತಗಟ್ಟೆಗೆ ಮತದಾರರು ಪ್ರವೇಶಿಸುವ ದ್ವಾರದಿಂದ ಹಿಡಿದು ಹೊರಾಂಗಣ ಮತ್ತು ಒಳಾಂಗಣವೆಲ್ಲವೂ ಅಲಂಕಾರದಲ್ಲಿ ಮುಳುಗಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp