ಸೋಮವಾರ, ಸೆಪ್ಟೆಂಬರ್ 20, 2021
22 °C

ನೋಡಿ: ಗದ್ದೆಗಿಳಿದು ಭತ್ತದ ನಾಟಿ ಮಾಡಿದ ನಟ ರಕ್ಷಿತ್ ಶೆಟ್ಟಿ

ನಟ ರಕ್ಷಿತ್ ಶೆಟ್ಟಿ ಭಾನುವಾರ ಬ್ರಹ್ಮಾವರ ತಾಲ್ಲೂಕಿನ ವಾರಂಬಳ್ಳಿಯಲ್ಲಿ ಗದ್ದೆಗಿಳಿದು ಭತ್ತದ ನಾಟಿ ಮಾಡಿದರು. ಸಾಂಪ್ರದಾಯಿಕ ಅಡಿಕೆ ಹಾಳೆಯ ಟೋಪಿ ಧರಿಸಿದ್ದ ರಕ್ಷಿತ್ ಶೆಟ್ಟಿಯನ್ನು ನೋಡಲು ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು.

ಕೇದಾರೋತ್ಥಾನ ಟ್ರಸ್ಟ್‌ ಹಮ್ಮಿಕೊಂಡಿದ್ದ ಹಡಿಲುಭೂಮಿ ಕೃಷಿ ಆಂದೋಲನಕ್ಕೆ ಚಾಲನೆ ನೀಡಿ ಮಾತನಾಡಿದ ರಕ್ಷಿತ್ ಶೆಟ್ಟಿ, ‘ಒತ್ತಡದ ನಡುವೆ ಕೃಷಿ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು ಖುಷಿ ಕೊಟ್ಟಿದೆ. ಚಿಕ್ಕವನಾಗಿದ್ದಾಗ ಕಣ್ಣು ಹಾಯಿಸಿದಷ್ಟು ಭೂಮಿಯಲ್ಲಿ ಭತ್ತದ ಕೃಷಿ ಕಾಣುತ್ತಿತ್ತು. ಕಳೆದ 10 ರಿಂದ 15 ವರ್ಷಗಳಲ್ಲಿ ಕೃಷಿ ಮಾಡುವವರ ಸಂಖ್ಯೆ ಕಡಿಮೆಯಾಗಿದೆ. ನನ್ನ ತಂದೆ ಇಂದಿಗೂ ಕೃಷಿ ಕಾಯಕದಲ್ಲಿ ತೊಡಗಿಸಿಕೊಂಡಿದ್ದಾರೆ’ ಎಂದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...