ಮಂಗಳವಾರ, ಜೂನ್ 22, 2021
24 °C

ನೋಡಿ: ಕರ್ಫ್ಯೂ ಇದ್ದರೂ ಪಲ್ಲಕ್ಕಿ ಮೆರವಣಿಗೆ ಮಾಡಿಸಿಕೊಂಡ ಸ್ವಾಮೀಜಿ!

ವಿಜಯಪುರ: ಜಿಲ್ಲೆಯ ಕೊಲ್ಹಾರ ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದ ಪೀಠಾಧಿಪತಿ ಕಲ್ಲಿನಾಥ ಸ್ವಾಮೀಜಿ ದವನದ ಹುಣ್ಣಿಮೆ ಅಂಗವಾಗಿ ಬುಧವಾರ ಪಲ್ಲಕ್ಕಿಯಲ್ಲಿ ಕುಳಿತು ಭಕ್ತರಿಂದ ಮೆರವಣಿಗೆ ಮಾಡಿಸಿಕೊಂಡಿದ್ದಾರೆ.

ತಹಶೀಲ್ದಾರ್‌ ಹಾಗೂ ಪೊಲೀಸರು ಪಲ್ಲಕ್ಕಿ ಮೆರವಣಿಗೆ, ಜಾತ್ರೆ ನಡೆಸದಂತೆ ಸೂಚಿಸಿದ್ದರೂ ಸಹ ಲಾಕ್‌ಡೌನ್ ನಿಯಮಗಳನ್ನು ಗಾಳಿಗೆ ತೂರಿ ಪಲ್ಲಕ್ಕಿ ಮೆರವಣಿಗೆ ಮಾಡಿಸಿಕೊಂಡಿದ್ದಾರೆ.

‘ಕಲ್ಲಿನಾಥ ಸ್ವಾಮೀಜಿಗೆ ಪಲ್ಲಕ್ಕಿ ಉತ್ಸವ, ಮೆರವಣಿಗೆ ನಡೆಸದಂತೆ ಸೂಚಿಸಲಾಗಿತ್ತು. ನಿಯಮ ಮೀರಿ ಪಲ್ಲಕ್ಕಿ ಮೆರವಣಿಗೆ ನಡೆಸಿರುವುದು ಗಮನಕ್ಕೆ ಬಂದಿದೆ. ಸ್ವಾಮೀಜಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಕೊಲ್ಹಾರ ತಹಶೀಲ್ದಾರ್‌ ಎಸ್.ಡಿ.ಮುರಾಳ ‘ಪ್ರಜಾವಾಣಿ’ಗೆ ಮಾಹಿತಿ ನೀಡಿದರು