ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ | ನಿರೀಕ್ಷೆಯಿಲ್ಲದ ಸಿನಿಪಯಣ ಚೆನ್ನ: ಶಿವರಾಜ್‌ಕುಮಾರ್‌

Last Updated 20 ಆಗಸ್ಟ್ 2021, 3:56 IST
ಅಕ್ಷರ ಗಾತ್ರ

1986ರಲ್ಲಿ ಸಿನಿಮಾ ರಂಗಕ್ಕೆ ಕಾಲಿಟ್ಟ ಶಿವರಾಜ್‌ಕುಮಾರ್‌ 125ನೇ ಚಿತ್ರದ ಹೊಸ್ತಿಲಿನಲ್ಲಿದ್ದಾರೆ. 35 ವರ್ಷಗಳ ಈ ಸಿನಿಪಯಣವನ್ನು ‘ಆನಂದ್‌’ ಎಂಬ ಪ್ರೇಮಕಥೆಯ ಮೂಲಕ ಆರಂಭಿಸಿದ ಶಿವಣ್ಣನ 124ನೇ ಸಿನಿಮಾ ‘ನೀ ಸಿಗೋವರೆಗೂ’ ಕೂಡಾ ಪ್ರೇಮಕಥೆಯೇ ಆಗಿದೆ. ರಾಮ್‌ ಧುಲಿಪುಡಿ ನಿರ್ದೇಶನದ ಈ ಚಿತ್ರದ ಮುಹೂರ್ತ ಇತ್ತೀಚೆಗೆ ನಡೆಯಿತು. ನಟ ಸುದೀಪ್‌ ಕ್ಲ್ಯಾಪ್‌ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭಕೋರಿದರು.

ಬಾಲಶ್ರೀರಾಮ್ ಸ್ಟುಡಿಯೋಸ್ ಲಾಂಛನದಲ್ಲಿ ಸ್ವಾತಿ ವನಪಲ್ಲಿ, ಶ್ರೀಕಾಂತ್ ಧುಲಿಪುಡಿ ಹಾಗೂ ನಾರಾಲ ಶ್ರೀನಿವಾಸ ರೆಡ್ಡಿ ಈ ಚಿತ್ರವನ್ನು ನಿರ್ಮಿಸುತ್ತಿದ್ದು, ಆ.19ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರು, ಕಾಶ್ಮೀರ, ವಾರಣಾಸಿಯಲ್ಲಿ ಚಿತ್ರದ ಚಿತ್ರೀಕರಣ ನಡೆಯಲಿದೆ.

ಜನವರಿಯಲ್ಲಿ ಚಿತ್ರೀಕರಣ ಪೂರ್ಣಗೊಂಡು, 2022ರ ಏಪ್ರಿಲ್‌ ವೇಳೆಗೆ ಚಿತ್ರವು ತೆರೆಗೆ ಬರುವ ಸಾಧ್ಯತೆ ಇದೆ. ಕಳೆದ ಮೂರ್ನಾಲ್ಕು ವರ್ಷಗಳಿಂದ ‘ಮಫ್ತಿ’, ‘ಟಗರು’ನಂತಹ ಆ್ಯಕ್ಷನ್‌ ಚಿತ್ರಗಳಲ್ಲೇ ಕಾಣಿಸಿಕೊಂಡಿದ್ದ ಶಿವರಾಜ್‌ಕುಮಾರ್‌ ಇದೀಗ ಮತ್ತೆ ಪ್ರೇಮಕಥೆ ಹೊಂದಿರುವ ಚಿತ್ರದತ್ತ ಹೆಜ್ಜೆ ಇಟ್ಟಿದ್ದಾರೆ. ಈ ಪಯಣದ ಬಗ್ಗೆ ಪ್ರಜಾವಾಣಿ ‘ಸಿನಿಮಾ ಪುರವಣಿ’ ಜೊತೆ ಶಿವರಾಜ್‌ಕುಮಾರ್‌ ಮಾತಿಗಿಳಿದ್ದಿದ್ದು ಹೀಗೆ....

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT