ಶುಕ್ರವಾರ, ಆಗಸ್ಟ್ 14, 2020
28 °C

ಉತ್ತರ ಕನ್ನಡದಲ್ಲಿ ಭಾರಿ ಮಳೆ: ಹೆದ್ದಾರಿ ಮೇಲೆ ಹರಿದ ನೀರು

 

ಕಾರವಾರ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಗುರುವಾರ ಬೆಳಗಿನ ಜಾವದಿಂದ ಭಾರಿ ಮಳೆಯಾಗುತ್ತಿದೆ. ಗುಡುಗು ಮತ್ತು ಗಾಳಿಯೂ ಜೊತೆಯಾಗಿವೆ.

ಕಾರವಾರ ತಾಲ್ಲೂಕಿನ ಅಮದಳ್ಳಿ ಹಾಗೂ ಮುದಗಾ ಸುತ್ತಮುತ್ತ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಎರಡು ಅಡಿಗಳಿಗೂ ಅಧಿಕ ಪ್ರಮಾಣದಲ್ಲಿ ನೀರು ನಿಂತಿದೆ. ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ. ಅಮದಳ್ಳಿಯ ವೀರಗಣಪತಿ ದೇವಸ್ಥಾನದ ಆವರಣದಲ್ಲೂ ನೀರು ತುಂಬಿದೆ.