ಬುಧವಾರ, ಸೆಪ್ಟೆಂಬರ್ 23, 2020
27 °C

ಕರ್ನಾಟಕದಾದ್ಯಂತ ಮುಂದುವರಿದ ಭಾರಿ ಮಳೆ, ಪ್ರವಾಹ: ರಸ್ತೆಗಳು ಜಲಾವೃತ, ವಸತಿ ಪ್ರದೇಶಗಳಿಗೆ ನುಗ್ಗಿದ ನೀರು

ದಕ್ಷಿಣ ಕನ್ನಡ, ಯಾದಗಿರಿ, ಮೈಸೂರು ಸೇರಿದಂತೆ ಕರ್ನಾಟಕದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಅನೇಕ ಕಡೆ ವಸತಿ ಪ್ರದೇಶಗಳಿಗೆ ನೀರು ನುಗ್ಗಿದೆ, ಸೇತುವೆಗಳು ಮುಳುಗಡೆಯಾಗುವ ಅಪಾಯದಲ್ಲಿದೆ. ಜಲಾಶಯಗಳಿಂದ ನೀರು ಬಿಡಲಾಗುತ್ತಿದೆ. ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ.