ಶುಕ್ರವಾರ, ಮೇ 29, 2020
27 °C

ಚಾಮರಾಜನಗರ | ಲಾಕ್‌ಡೌನ್‌ ಅವಧಿಯಲ್ಲಿ ಶಾಸಕರ ಮಗನ ಕುದುರೆ ಸವಾರಿ!

ಚಾಮರಾಜನಗರ: ಗುಂಡ್ಲುಪೇಟೆ ಶಾಸಕ ಸಿ.ಎಸ್.ನಿರಂಜನಕುಮಾರ್ ಅವರ ಮಗ ಊಟಿ ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ‌ಕುದುರೆ ಸವಾರಿ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಲಾಕ್‌ಡೌನ್ ಅವಧಿಯಲ್ಲಿ ಶಾಸಕರ ಪುತ್ರ ಶೋಕಿ ಮಾಡುತ್ತಿದ್ದಾರೆ ಎಂದು ಸ್ಥಳೀಯ ಕಾಂಗ್ರೆಸ್ ‌ಮುಖಂಡರು ಆರೋಪಿಸಿದ್ದಾರೆ. ಇದು ಹಳೆಯ ವಿಡಿಯೊ ಎಂದು ಶಾಸಕರ ಬೆಂಬಲಿಗರು ಹೇಳುತ್ತಿದ್ದಾರೆ.