ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಥುವಾ: 8 ತಿಂಗಳ ಗರ್ಭಿಣಿ– ಈಗಲೂ ರೋಗಿಗಳ ಸೇವೆ ಮುಂದುವರಿಸಿದ ವೈದ್ಯೆ

Last Updated 10 ಜೂನ್ 2021, 14:15 IST
ಅಕ್ಷರ ಗಾತ್ರ

ಕಥುವಾ: ಇಡೀ ದೇಶ ಕೋವಿಡ್ ಸಾಂಕ್ರಾಮಿಕ ವೈರಸ್‌ನ ಹೊಡೆತಕ್ಕೆ ಸಿಲುಕಿದೆ. ಮಾಸ್ಕ್ ಹಾಕಿಕೊಂಡೇ ಹೊರಗೆ ಬರುವ ಪರಿಸ್ಥಿತಿ ಇದೆ. ಎಲ್ಲಿ, ಯಾವಾಗ ಸೋಂಕು ವಕ್ಕರಿಸುತ್ತೋ ಎಂಬ ಆತಂಕ ಆವರಿಸಿದೆ. ಇಂತಹ ಕಠಿಣ ಸಂದರ್ಭದಲ್ಲಿಯೂ ಉತ್ತರ ಪ್ರದೇಶದ 8 ತಿಂಗಳ ತುಂಬು ಗರ್ಭಿಣಿ ವೈದ್ಯೆಯೊಬ್ಬರು ಈಗಲೂ ರೋಗಿಗಳ ಸೇವೆ ಮಾಡುತ್ತಿದ್ದಾರೆ. ಕಥುವಾ ಆರೋಗ್ಯ ಕೇಂದ್ರದ ವೈದ್ಯೆ ಡಾ. ಶಿವಾನಿ ಈ ಸಂದರ್ಭದಲ್ಲೂ ತಮ್ಮ ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ. ಗರ್ಭಿಣಿಯಾಗಿರುವುದು ಇದುವರೆಗೆ ನನ್ನ ವೃತ್ತಿಗೆ ತೊಡಕಾಗಿಲ್ಲ. ಕೋವಿಡ್ ಹರಡುತ್ತಿರುವ ಈ ಸಂದರ್ಭದಲ್ಲಿ ಇಲ್ಲಿ ರೋಗಿಗಳ ಆರೈಕೆ ಮಾಡುವುದು ನನ್ನ ಕರ್ತವ್ಯವಾಗಿದೆ. ಆರೋಗ್ಯ ಸಮಸ್ಯೆ ಎದುರಿಸುತ್ತಿರುವ ರೋಗಿಗಳಿಗೆ ನಮ್ಮ ಅಗತ್ಯವಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT