ಸೋಮವಾರ, ಏಪ್ರಿಲ್ 19, 2021
23 °C

Video: ಛತ್ತೀಸ್‌ಗಡ: ನಕ್ಸಲ್ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಅಮಿತ್ ಶಾ ಗೌರವ ನಮನ

ಜಗದಾಲ್ಪುರ: ಛತ್ತೀಸ್‌ಗಡದ ಬಸ್ತಾರ್ ಪ್ರದೇಶದಲ್ಲಿ ನಕ್ಸಲರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಹುತಾತ್ಮರಾದ ಭದ್ರತಾ ಸಿಬ್ಬಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಇಲ್ಲಿ ಗೌರವ ನಮನ ಸಲ್ಲಿಸಿದರು. ದೆಹಲಿಯಿಂದ ಜಗದಾಲ್ಪುರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಗೃಹ ಸಚಿವರು, ಇಲ್ಲಿನ ಪೊಲೀಸ್ ಲೇನ್‌ಗೆ ಭೇಟಿ ನೀಡಿ, ಹುತಾತ್ಮರಾದ 14 ಭದ್ರತಾ ಸಿಬ್ಬಂದಿಯ ಪಾರ್ಥಿವ ಶರೀರಗಳಿಗೆ ಪುಷ್ಪಗುಚ್ಛದೊಂದಿಗೆ ಗೌರವ ನಮನ ಸಲ್ಲಿಸಿದರು. ಇದೇ ವೇಳೆ ಛತ್ತೀಸ್‌ಗಡ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಇತರೆ ಉನ್ನತ ಮಟ್ಟದ ಅಧಿಕಾರಿಗಳು ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp