ಶನಿವಾರ, ಮೇ 15, 2021
26 °C

ನೋಡಿ: ಏಳು ಟ್ಯಾಂಕರ್‌ಗಳಲ್ಲಿ ಆಮ್ಲಜನಕ ಹೊತ್ತು ಮಹಾರಾಷ್ಟ್ರಕ್ಕೆ ತೆರಳಿದ ’ಆಕ್ಸಿಜನ್ ಎಕ್ಸ್‌ಪ್ರೆಸ್’

ನವದೆಹಲಿ: ಭಾರತೀಯ ರೈಲ್ವೆಯ ಆಕ್ಸಿಜನ್‌ ಎಕ್ಸ್‌ಪ್ರೆಸ್‌ ರೈಲು ಏಳು ಟ್ಯಾಂಕರ್‌ಗಳಲ್ಲಿ ಆಮ್ಲಜನಕ ಹೊತ್ತುಕೊಂಡು ಗುರುವಾರ ತಡರಾತ್ರಿ ವಿಶಾಖಪಟ್ಟಣದಿಂದ ಮಹಾರಾಷ್ಟ್ರಕ್ಕೆ ಹಿಂತಿರುಗಿದೆ. ಈ ಕುರಿತು ಕೇಂದ್ರ ರೈಲ್ವೆ ಸಚಿವ ಪೀಯುಷ್‌ ಗೋಯಲ್‌ ಅವರು ಆಕ್ಸಿಜನ್‌ ಎಕ್ಸ್‌ಪ್ರೆಸ್‌ ಸಂಚರಿಸುತ್ತಿರುವ ವಿಡಿಯೊವನ್ನು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ‘ರೈಲ್ವೆ ಇಲಾಖೆ ದೇಶದ ನಾಗರಿಕರ ಯೋಗಕ್ಷೇಮವನ್ನು ಕಾಪಾಡುವ ನಿಟ್ಟಿನಲ್ಲಿ ಕಷ್ಟದ ಸಂದರ್ಭದಲ್ಲಿ ಎಲ್ಲಾ ಅಗತ್ಯ ಸರಕುಗಳನ್ನು ಸಾಗಿಸುವ ಮೂಲಕ ರಾಷ್ಟ್ರಕ್ಕೆ ಸೇವೆ ಸಲ್ಲಿಸುತ್ತಿದೆ’ ಎಂದು ಗೋಯಲ್‌ ಹೇಳಿದ್ದಾರೆ.