ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಕಚ್ಚಾ ಬಾಂಬ್ ದಾಳಿ

Last Updated 6 ಮೇ 2021, 7:48 IST
ಅಕ್ಷರ ಗಾತ್ರ

ಪಶ್ಚಿಮ ಬಂಗಾಳದಲ್ಲಿ ಮತ ಎಣಿಕೆ ಬಳಿಕ ನಡೆದ ಹಿಂಸಾಚಾರದಲ್ಲಿ ಹಲವು ಬಿಜೆಪಿ ಕಾರ್ಯಕರ್ತರ ಹತ್ಯೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ಈ ಆರೋಪಕ್ಕೆ ಇಂಬು ನೀಡುವಂತೆ, ಭಟ್ಪಾರದ ಕಂಕಿನಾರ ರಾಮ್‌ನಗರ್ ಕಾಲೋನಿ ಪ್ರದೇಶದಲ್ಲಿ ಭಾರತೀಯ ಜನತಾ ಪಾರ್ಟಿಕಾರ್ಯಕರ್ತನ ಮನೆಯನ್ನು ಮೇ 04 ರಂದು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ.

ಈ ದುಷ್ಕೃತ್ಯದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ದುಷ್ಕರ್ಮಿಗಳು ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಕಚ್ಚಾ ಬಾಂಬ್‌ ಎಸೆದಿರುವುದು ದೃಶ್ಯದಲ್ಲಿ ಸ್ಪಷ್ಟವಾಗಿದೆ. ಈ ದಾಳಿಯ ಹಿಂದೆ ಟಿಎಂಸಿ ಕೈವಾಡವಿದೆ ಎಂದು ಬಿಜೆಪಿ ಕಾರ್ಯಕರ್ತರು ಆರೋಪಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಬಳಿಕ ನಡೆದ ಹಿಂಸಾಚಾರದಲ್ಲಿ ಪಕ್ಷದ 14 ಮಂದಿ ಕಾರ್ಯಕರ್ತರನ್ನು ಹತ್ಯೆಗೈಯಲಾಗಿದ್ದು, ಸುಮಾರು ಒಂದು ಲಕ್ಷ ಜನರು ತಮ್ಮ ಮನೆಯನ್ನು ಬಿಟ್ಟು ಅಸ್ಸಾಂಗೆ ಪಲಾಯನ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಆರೋಪಿಸಿರುವುದನ್ನು ಇಲ್ಲಿ ಸ್ಮರಿಸಬಹುದು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT