ಗುರುವಾರ , ಅಕ್ಟೋಬರ್ 22, 2020
21 °C

IPL-2020 | DC vs KKR: ಕೆಕೆಆರ್ ವಿರುದ್ಧ ಜಯ; ಮತ್ತೆ ಅಗ್ರಸ್ಥಾನಕ್ಕೇರಿದ ಡೆಲ್ಲಿ

ಡೆಲ್ಲಿ ಕ್ಯಾಪಿಟಲ್ಸ್‌ ನೀಡಿದ್ದ 229 ರನ್‌ಗಳ ಬೃಹತ್‌ ಗುರಿ ಎದುರು ಕೊನೆಯವರೆಗೂ ಹೋರಾಟ ನಡೆಸಿದ ಕೋಲ್ಕತ್ತ ನೈಟ್‌ರೈಡರ್ಸ್‌ 8 ವಿಕೆಟ್‌ ಕಳೆದುಕೊಂಡು 210 ರನ್‌ ಗಳಿಸಲಷ್ಟೇ ಶಕ್ತವಾಯಿತು. ಹೀಗಾಗಿ ಈ ತಂಡ 18 ರನ್ ಅಂತರದ ಸೋಲು ಅನುಭವಿಸಿತು. ಈ ಗೆಲುವಿನೊಂದಿಗೆ ಡೆಲ್ಲಿ ತಂಡ ಪಾಯಿಂಟ್ಸ್‌ ಪಟ್ಟಿಯಲ್ಲಿ ಮೊದಲ ಸ್ಥಾನಕ್ಕೇರಿದೆ. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು, ಮುಂಬೈ ಇಂಡಿಯನ್ಸ್‌ ಮತ್ತು ಸನ್‌ರೈಸರ್ಸ್‌ ತಂಡಗಳು ಕ್ರಮವಾಗಿ 2, 3 ಮತ್ತು 4ನೇ ಸ್ಥಾನಗಳಲ್ಲಿವೆ.