ಗುರುವಾರ , ಜುಲೈ 7, 2022
23 °C

Video | ಕರ್ನಾಟಕದಲ್ಲೂ ಆಪ್ ಸರ್ಕಾರ: ಕೇಜ್ರಿವಾಲ್

ದೆಹಲಿ, ಪಂಜಾಬ್‌ನಲ್ಲಿ ಅಧಿಕಾರ ನಡೆಸುತ್ತಿರುವ ಆಮ್‌ ಆದ್ಮಿ ಪಕ್ಷ ಕರ್ನಾಟಕದಲ್ಲೂ ತನ್ನ ಕಾಲೂರುವ ಯತ್ನಕ್ಕೆ ಮುಂದಡಿ ಇಟ್ಟಿದ್ದು, 2023ರ ಚುನಾವಣೆಯಲ್ಲಿ ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರು ಸೇನೆ ಜತೆ ಒಗ್ಗೂಡಿ ಸ್ಪರ್ಧೆಗಿಳಿಯುವುದಾಗಿ ಘೋಷಿಸಿದೆ. ಬೆಂಗಳೂರಿನ ನ್ಯಾಷನಲ್‌ ಕಾಲೇಜು ಮೈದಾನದಲ್ಲಿ ನಡೆದ ರೈತರ ಬೃಹತ್‌ ಸಮಾವೇಶದಲ್ಲಿ ಮಾತನಾಡಿದ ಅವರು,  ’ಭ್ರಷ್ಟಾಚಾರ ಮುಕ್ತ ಆಡಳಿತ ನಡೆಸಲು ಕರ್ನಾಟಕದಲ್ಲಿ ಬದಲಾವಣೆ ಅಗತ್ಯ’ ಎಂದರು. ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷವನ್ನು ಅಧಿಕಾರಕ್ಕೆ ತರಲು ರೈತ ಸಂಘ ಕೈಜೋಡಿಸಲಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಹೇಳಿದರು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...