ಸೋಮವಾರ, ಸೆಪ್ಟೆಂಬರ್ 26, 2022
24 °C

Video: PayCM ಕಾಂಗ್ರೆಸ್‌ ಅಭಿಯಾನಕ್ಕೆ ಬಿಜೆಪಿ ತಿರುಗೇಟು!

ರಾಜ್ಯ ಬಿಜೆಪಿ ಸರ್ಕಾರ 'ಶೇ 40 ಕಮಿಷನ್ ಸರ್ಕಾರ'ವೆಂದು ಆರೋಪಿಸಿ 'ಪೇ ಸಿಎಂ' (PayCM) ಘೋಷಣೆಯ ಭಿತ್ತಿಪತ್ರ ಮತ್ತು ಕ್ಯೂ ಆರ್ ಕೋಡ್ ಸಹಿತ ಕಾಂಗ್ರೆಸ್ ಪಕ್ಷ ಅಭಿಯಾನ ನಡೆಸಿತು. ಬೆಂಗಳೂರು ನಗರದ ವಿವಿಧೆಡೆ ಮುಖ್ಯಮಂತ್ರಿ ಚಿತ್ರ ಸಹಿತ ಈ ಭಿತ್ತಿಪತ್ರಗಳನ್ನು ಅಂಟಿಸಲಾಗಿತ್ತು. ಮಧ್ಯಾಹ್ನದ ವೇಳೆಗೆ, ಪೊಲೀಸರು ಇವುಗಳನ್ನು ತೆರವುಗೊಳಿಸಿದರು. ಕಾಂಗ್ರೆಸ್ ಅಭಿಯಾನಕ್ಕೆ ತಿರುಗೇಟು ನೀಡಿರುವ ಬಿಜೆಪಿ, ಭಾರತ್‌ ಜೋಡೋ ಯಾತ್ರೆಯನ್ನು ಟೀಕಿಸಿದೆ. ರಾಜ್ಯ ಮತ್ತು ಮುಖ್ಯಮಂತ್ರಿಯ ಹೆಸರು ಕೆಡಿಸಲು ಕಾಂಗ್ರೆಸ್‌ ನಡೆಸಿರುವ ಷಡ್ಯಂತ್ರ ಇದು ಎಂದು ಬಸವರಾಜ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ.
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ.
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ.
ಟ್ವಿಟರ್‌ನಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಚಾನೆಲ್‌ ನೋಡಿ...