ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video: ಸರ್ಕಾರಿ ಬಸ್‌ಗಳ ಸಂಚಾರದಲ್ಲಿ ಹೆಚ್ಚಳ: ಹೈಕೋರ್ಟ್ ಸೂಚನೆ ಬೆನ್ನಲ್ಲೇ ನೌಕರರು ಕರ್ತವ್ಯಕ್ಕೆ ಹಾಜರು

Last Updated 21 ಏಪ್ರಿಲ್ 2021, 8:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ನಾಲ್ಕೂ ಸಾರಿಗೆ ನಿಗಮಗಳ ಬಸ್ ಸಂಚಾರದಲ್ಲಿ ಬುಧವಾರ ಬೆಳಿಗ್ಗೆಯಿಂದ ಹೆಚ್ಚಳವಾಗಿದೆ. ಹೈಕೋರ್ಟ್ ಸೂಚನೆ ಬಳಿಕ ಹೆಚ್ಚಿನ ಸಂಖ್ಯೆಯ ನೌಕರರು ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಸಾರಿಗೆ ನಿಗಮಗಳ ಅಧಿಕಾರಿಗಳು ತಿಳಿಸಿದ್ದಾರೆ.

ಬುಧವಾರ ಬೆಳಿಗ್ಗೆ 9 ಗಂಟೆಯ ವೇಳೆಗೆ ನಾಲ್ಕೂ ನಿಗಮಗಳಿಂದ 6,410 ಬಸ್ ಗಳು ಸಂಚಾರ ಆರಂಭಿಸಿವೆ. ಸಂಜೆಯ ವೇಳೆಗೆ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗುವ ನಿರೀಕ್ಷೆ ಇದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸಾರಿಗೆ ನಿಗಮಗಳ ನೌಕರರು ವೇತನ ಪರಿಷ್ಕರಣೆಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿರುವುದಕ್ಕೆ ಹೈಕೋರ್ಟ್ ಮಂಗಳವಾರ ಅಸಮಾಧಾನ ವ್ಯಕ್ತಪಡಿಸಿತ್ತು. 'ಮುಷ್ಕರದ ಸಮಯ ಇದಲ್ಲ' ಎಂದಿದ್ದ ನ್ಯಾಯಾಲಯ, ಪ್ರತಿಭಟನೆ ಬಿಟ್ಟು ಕರ್ತವ್ಯಕ್ಕೆ ಹಾಜರಾಗುವಂತೆ ನೌಕರರಿಗೆ ಸೂಚಿಸಿತ್ತು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT