ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಡಿ- ಕೋವಿಡ್ ಕರ್ಫ್ಯೂ: ಬೆಂಗಳೂರು ಬಿಡುತ್ತಿರುವ ಜನರು

Last Updated 27 ಏಪ್ರಿಲ್ 2021, 9:10 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಕಾರಣ ಮಂಗಳವಾರ (ಏ.27) ರಾತ್ರಿಯಿಂದಲೇ 14 ದಿನಗಳ ಕಾಲ ಅಂದರೆ ಮೇ 12ರವರೆಗೆ ರಾಜ್ಯಾದ್ಯಂತ ಲಾಕ್‌ಡೌನ್‌ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಲಾಕ್‌ಡೌನ್ ಅಂಗವಾಗಿ ಅಂತರ್‌ ಜಿಲ್ಲೆ ಮತ್ತು ನೆರೆಯ ರಾಜ್ಯಗಳಿಗೆ ಹೋಗಲು ಸಾರಿಗೆ ಸಂಸ್ಥೆ ಮತ್ತು ಖಾಸಗಿ ಬಸ್‌ಗಳು ಇರುವುದಿಲ್ಲ. ತುರ್ತು ಸಂದರ್ಭದಲ್ಲಿ ಮಾತ್ರ ಬಸ್‌ ಅಥವಾ ಇತರ ವಾಹನಗಳಲ್ಲಿ ತೆರಳಲು ಅವಕಾಶ. ಬೆಂಗಳೂರಿನಲ್ಲಿ ಮೆಟ್ರೊ ಮತ್ತು ಬಿಎಂಟಿಸಿ ಬಸ್‌ಗಳು ಇರುವುದಿಲ್ಲ. ಉಳಿದ ನಗರಗಳಲ್ಲೂ ಸ್ಥಳೀಯ ಸಾರಿಗೆ ಬಸ್ಸುಗಳು ಇರುವುದಿಲ್ಲ ಎಂದಿರುವ ಬೆನ್ನಲ್ಲೇ ಕಾರ್ಮಿಕರ ವಲಸೆ ಮತ್ತೆ ಶುರುವಾಗಿದೆ ಮುಖ್ಯಮಂತ್ರಿಗಳ ಆದೇಶ ಹೊರ ಬೀಳುತ್ತಿದ್ದಂತೆ ಆತಂಕಕ್ಕೊಳಗಾದ ಸಾವಿರಾರು ಜನರು ಗಂಟು-ಮೂಟೆ ಕಟ್ಟಿಕೊಂಡು ತಮ್ಮ ಊರುಗಳಿಗೆ ತೆರಳಲು ಬಸ್ ಮತ್ತು ರೈಲ್ವೆ ನಿಲ್ದಾಣಗಳತ್ತ ದೌಡಾಯಿಸಿದ್ದಾರೆ. ಬಸ್ ನಿಲ್ದಾಣಗಳಲ್ಲಿ ಗಂಟು ಮೂಟೆ ಹೊತ್ತು ಸಾಗುತ್ತಿರುವ ದೃಶ್ಯ ಸಾಮಾನ್ಯವಾಗಿತ್ತು. ಮನೆ ಸೇರುವ ಧಾವಂತದಲ್ಲಿರುವ ಕಾರ್ಮಿಕರು ಮತ್ತು ಇತರೆ ಜನರು ಧಾವಂತದಲ್ಲಿ ಬಸ್ ಹತ್ತುತ್ತಿದ್ದದ್ದು ಕಂಡುಬಂತು. ತುಮಕೂರು ರಸ್ತೆಯಲ್ಲಿ ಹೆಚ್ಚಿನ ವಾಹನಗಳು ಸಂಚಾರ ನಡೆಸುತ್ತಿದ್ದು, ಟೋಲ್‌ನಲ್ಲಿ ಸಾಲುಗಟ್ಟಿ ನಿಂತಿದ್ದವು.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT