ಶನಿವಾರ, ಸೆಪ್ಟೆಂಬರ್ 18, 2021
22 °C

LIVE: ಬಿಎಸ್‌ವೈ ಸರ್ಕಾರಕ್ಕೆ ಎರಡು ವರ್ಷ; ಸಾಧನಾ ಸಮಾರಂಭ ಆರಂಭ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳಾಗುತ್ತಿರುವ ಪ್ರಯುಕ್ತ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸಾಧನಾ ಸಮಾವೇಶ ಆರಂಭವಾಗಿದೆ.

ಯಡಿಯೂರಪ್ಪ ಅವರೊಂದಿಗೆ ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಲಕ್ಷ್ಮಣ ಸವದಿ ವೇದಿಕೆಯಲ್ಲಿದ್ದಾರೆ.

ಸಚಿವರು, ಶಾಸಕರು ಮತ್ತು ಅಧಿಕಾರಿಗಳು ಸಮಾರಂಭದಲ್ಲಿ ಪಾಲ್ಗೊಂಡಿದ್ದಾರೆ. ತಮ್ಮ ಸರ್ಕಾರದ ಎರಡು ವರ್ಷಗಳ ಸಾಧನೆ ಕುರಿತು ಯಡಿಯೂರಪ್ಪ ಮಾತನಾಡಲಿದ್ದಾರೆ.